Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ಉಡುಪಿಯಲ್ಲಿ ಮತಾಂತರ ಆರೋಪ: ಹಿಂದೂ ಜಾಗರಣಾ ವೇದಿಕೆ ಸದಸ್ಯರಿಂದ ಚರ್ಚ್ ಮೇಲೆ ದಾಳಿ

ಉಡುಪಿ: ಅಕ್ರಮವಾಗಿ  ಹಿಂದೂ ಧರ್ಮದ ಮಕ್ಕಳು ಮತ್ತು ಮಹಿಳೆಯರನ್ನು ಕೂಡಿ ಹಾಕಿ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರಿನ ನಕ್ರೆ ಆನಂದಿ ಮೈದಾನದಲ್ಲಿರುವ ಪ್ರಗತಿ ಸೆಂಟರ್ ಮೇಲೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ್ದು, ಇಲ್ಲಿ ಹಲವಾರು ವರ್ಷಗಳಿಂದ ಮತಾಂತರ ನಡೆಯುತ್ತಿದೆ. ನೂರಾರು ಹಿಂದೂಗಳನ್ನು ಕ್ರೈಸ್ತ ಮಿಷನರಿಗಳು ಮತಾಂತರ ಮಾಡಿವೆ ಎಂದು ದಾಳಿ ನಡೆಸಿರುವವರು ಆರೋಪಿಸಿದ್ದಾರೆ.

ಪ್ರಗತಿ ಸೆಂಟರ್ ಮೇಲೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಏಕಾಏಕಿ ನುಗ್ಗಿದ ಕೂಡಲೇ ಪರಿಸ್ಥಿತಿ ಬಿಗಡಾಯಿಸಿದ್ದು, ಕೇಂದ್ರದಲ್ಲಿದ್ದ ಪ್ರಾರ್ಥನಾ ನಿರತರು ಹಾಗೂ ದಾಳಿಗಾರರ ನಡುವೆ ವಾಗ್ವಾದ ನಡೆದು ಸಂಘರ್ಷಕ್ಕೆ ಕಾರಣವಾಗಿದೆ.

ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಮಧ್ಯ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಉಡುಪಿ ಜಿಲ್ಲೆಯ ಕುಕ್ಕುಂದೂರು ನಕ್ರೆ ಆನಂದಿ ಮೈದಾನದಲ್ಲಿರುವ ಸದರಿ ಕೇಂದ್ರದಲ್ಲಿ ಅನೇಕ ಸಮಯದಿಂದ ಇಂತಹ ಚಟುವಟಿಕೆಗಳು ನಡೆಯುತ್ತಿವೆ. ಬೆನಡಿಕ್ಟ್ ನೇತೃತ್ವದಲ್ಲಿ ಮತಾಂತರ ಕಾರ್ಯ ನಡೆಯುತ್ತಿದೆ. ಯಾವುದೇ ಅನುಮತಿ ಪಡೆಯದೇ ಅಕ್ರಮವಾಗಿ ಪ್ರಾರ್ಥನಾಲಯ ನಡೆಸುತ್ತಿದ್ದಾರೆ ಎಂದು ಬಿಜೆಪಿ ಬೆಂಬಲಿತ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಆರೋಪಿಸಿದ್ದಾರೆ.

ಉಡುಪಿಯಲ್ಲಿ ಹಲವಾರು ವರ್ಷಗಳಿಂದ ಮತಾಂತರ ಪ್ರಕ್ರಿಯೆ ನಡೆಯುತ್ತಿದ್ದು, ನೂರಾರು ಹಿಂದೂಗಳನ್ನು ಕ್ರೈಸ್ತ ಮಿಷನರಿಗಳು ಮತಾಂತರ ಮಾಡಿವೆ. ಕಳೆದ ಹತ್ತು ವರ್ಷಗಳಿಂದ ಮತಾಂತರ ಕೆಲಸದಲ್ಲಿ ನಿರತವಾಗಿರುವ ಪ್ರಗತಿ ಸೆಂಟರ್ ಸಂಪೂರ್ಣ ಅಕ್ರಮವಾಗಿದ್ದು, ಯಾವುದೇ ಅನುಮತಿ ಪಡೆಯದೇ ಇದನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಾರ್ಥನಾ ನಿರತರ ಹಲ್ಲೆ ನಡೆಸಲಾಗಿದೆ ಎಂದು ಬೆನಡಿಕ್ಟ್ ಎಂಬುವರು ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದು, 15 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ ಇನ್ನೊಂದೆಡೆ ಸುನೀಲ್ ಎಂಬುವರು ಪ್ರತಿ ದೂರು ನೀಡಿದ್ದು ‌ಬೆನಡಿಕ್ಟ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

No Comments

Leave A Comment