Log In
BREAKING NEWS >
ನ. 21ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ "ವಿಶ್ವರೂಪದರ್ಶನ"ಜರಗಲಿದೆ...

ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಕಚೇರಿ ಉದ್ಘಾಟನೆ-ವಿವಿಧ ಸಮಿತಿಗಳ ಪಟ್ಟಿ ಪ್ರಕಟ

ಉಡುಪಿ: ಮುಂದಿನ ಜ. 18ರಂದು ಸರ್ವಜ್ಞ ಪೀಠಾರೋಹಣಗೈದು ದ್ವೈವಾರ್ಷಿಕ ಪರ್ಯಾಯ ಶ್ರೀಕೃಷ್ಣ ಪೂಜಾ ಕೈಂಕರ್ಯ ಸ್ವೀಕರಿಸಲಿರುವ ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಕಚೇರಿಯನ್ನು ಅನಂತನ ಚತುರ್ದಶಿ ಶುಭದಿನದಂದು ಉದ್ಘಾಟಿಸಲಾಯಿತು.

ಭಾವೀ ಪರ್ಯಾಯ ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಉದ್ಘಾಟಿಸಿದರು.
ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿ, ಸಂಪ್ರದಾಯಕ್ಕೆ ಚ್ಯುತಿಯಾಗದಂತೆ ಪರ್ಯಾಯ ಮಹೋತ್ಸವ ಆಚರಿಸುವುದಾಗಿ ಶ್ರೀಗಳು ತಿಳಿಸಿದರು.

ಶಾಸಕ ರಘುಪತಿ ಭಟ್, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಮತ್ತು ಪ್ರಮೋದ್ ಮಧ್ವರಾಜ್, ನಗರ ಸಭೆಯ ಅಧ್ಯಕ್ಷೆ ಶ್ರೀಮತಿ ಸುಮಿತ್ರ ನಾಯಕ್, ಪ್ರಮುಖರಾದ ಕಟೀಲು ಕ್ಷೇತ್ರದ ಅರ್ಚಕರಾದ ವಾಸುದೇವ ಆಸ್ರಣ್ಣ, ಲಕ್ಷ್ಮೀನಾರಾಯಣ ಆಸ್ರಣ್ಣ ಮತ್ತು ಅನಂತಪದ್ಮನಾಭ ಆಸ್ರಣ್ಣ, ಹರಿಕೃಷ್ಣ ಪುನರೂರು, ಪ್ರದೀಪಕುಮಾರ್ ಕಲ್ಕೂರ್, ಶ್ರೀಪತಿ ಭಟ್ ಮೂಡುಬಿದಿರೆ, ಭುವನಾಭಿರಾಮ ಉಡುಪ, ತಲ್ಲೂರು ಶಿವರಾಮ ಶೆಟ್ಟಿ ,ಬಿ.ವಿಜಯ ರಾಘವ ರಾವ್,ಕೆ.ಗಣೇಶ್ ರಾವ್, ಮುರಳೀಕಡೆಕಾರ್,ಅಜೇಶ್ ಪೈ,ವೆ೦ಕಟೇಶ್ ಭಟಠಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಸಮಿತಿ ಅಧ್ಯಕ್ಷ ಕುಂಭಾಶಿ ಸೂರ್ಯನಾರಾಯಣ ಉಪಾಧ್ಯಾಯ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರು ಸಮಿತಿ ಸದಸ್ಯರ ಪಟ್ಟಿ ವಾಚಿಸಿದರು. ಸಾರ್ವಜನಿಕ ಸಂಪರ್ಕಾಧಿಕಾರಿ ಬಿ. ವಿ. ಲಕ್ಷ್ಮೀನಾರಾಯಣ ನಿರೂಪಿಸಿದರು.

No Comments

Leave A Comment