Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ದೀಪ ಪ್ರಜ್ವಲನೆಯೊ೦ದಿಗೆ ವಿದ್ಯುಕ್ತ ಚಾಲನೆ.......ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಕೃಷಿ ಕಾಯಿದೆಗಳು, ವಿದ್ಯುತ್ ಮಸೂದೆ ತಿದ್ದುಪಡಿ ರದ್ದತಿಗಾಗಿ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿ-ಬೆಲೆ ಏರಿಕೆ ವಿರುದ್ಧದ ಭಾರತ ಬಂದ್‌- ಉಡುಪಿಯಲ್ಲಿ ಪ್ರತಿಭಟನೆ

ಉಡುಪಿ, ಸೆ.27: ಮೂರು ಕೃಷಿ ಕಾಯಿದೆಗಳು, ವಿದ್ಯುತ್ ಮಸೂದೆ ತಿದ್ದುಪಡಿ ರದ್ದತಿಗಾಗಿ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗಾಗಿ ಹಾಗೂ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧದ ಭಾರತ ಬಂದ್‌ಗೆ ಬೆಂಬಲವಾಗಿ ವಿವಿಧ ಸಂಘಟನೆಗಳು ಸೋಮವಾರ ಉಡುಪಿಯಲ್ಲಿ ಪ್ರತಿಭಟನೆ ನಡೆಸಿದವು.

ನಗರದ ಜೋಡುಕಟ್ಟೆಯಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯು ಕೋರ್ಟ್ ರಸ್ತೆ, ಹಳೆ ಡಯನ ಸರ್ಕಲ್‌ನಲ್ಲಿ ತಿರುಗಿ ವಾಪಾಸು ಅದೇ ಮಾರ್ಗದಲ್ಲಿ ಜೋಡುಕಟ್ಟೆಯ ಮೂಲಕ ಅಜ್ಜರಕಾಡು ಹುತಾತ್ಮ ಸ್ಮಾರಕದೆದುರು ಸಮಾಪ್ತಿಗೊಂಡಿತು.

ಪ್ರತಿಭಟನೆಯಲ್ಲಿ ನೂರಾರು ಮಂದಿ ಭಾಗವಹಿಸಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರಗಳ ನೀತಿಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಸಿಟಿಯು ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಈ ಸಂದರ್ಭದಲ್ಲಿ ಅಂಬೇಡ್ಕರ್‌ ವಾದ ಜಿಲ್ಲಾ ಪ್ರಧಾನ ಸಂಚಾಲಕ ಸು೦ದರ್ ಮಾಸ್ತರ್ ಮೊದಲಾದವರು ಮಾತನಾಡಿದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾ೦ಚನ್ ,ಜಿಲ್ಲಾ ಮುಸ್ಲಿಮ್ ಒಕ್ಕೂಟ ಉಪಾಧ್ಯಕ್ಷ ಇದ್ರೀಸ್ ಹೂಡೆ, ಉಡುಪಿ ತಾಲೂಕು ಕಾರ್ಯದರ್ಶಿರವಿರಾಜ್
ಅದರ ಕಾಂಗ್ರೆಸ್ ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಯತೀಶ್ , ಶಿವಾನಂದ ಮೊದಲಾದ ಮುಖ೦ಡರು ಹಾಜರಿದ್ದರು.

No Comments

Leave A Comment