Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಬೆಂಗಳೂರಿನಲ್ಲಿ ಮತ್ತೊಂದು 3 ಅಂತಸ್ತಿನ ಕಟ್ಟಡ ಕುಸಿತ; ಡೈರಿ ಸರ್ಕಲ್ ಬಳಿ ದುರ್ಘಟನೆ, ನಾಲ್ವರಿಗೆ ಗಾಯ

ಬೆಂಗಳೂರು: ನಗರದಲ್ಲಿ ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ವಿಲ್ಸನ್ ಗಾರ್ಡನ್ ಸಮೀಪದ ಲಕ್ಕಸಂದ್ರದಲ್ಲಿ ನಿನ್ನೆ 3 ಅಂತಸ್ತಿನ ಮನೆ ಕುಸಿದು ಬಿದ್ದ ಅರ್ಧ ಕಿಲೋ ಮೀಟರ್ ಮುಂದೆ ಕೆಎಂಎಫ್ ಕ್ವಾರ್ಟರ್ಸ್ ನೊಳಗಿರುವ 50 ವರ್ಷದ ಕಟ್ಟಡ ಕುಸಿದುಬಿದ್ದಿದೆ. ಇದು ಡೇರಿ ಸರ್ಕಲ್ ಬಳಿ ಇರುವ ಬಮೂಲ್ ನೌಕಕರ ಕ್ವಾರ್ಟರ್ಸ್ ಆಗಿದೆ.

ಹೀಗೆ ಒಂದಾದ ಮೇಲೊಂದರಂತೆ ದುರಂತ ಸಂಭವಿಸುತ್ತಿರುವುದು ನಿಜಕ್ಕೂ ನಗರದ ಜನತೆಯನ್ನು ಆತಂಕಕ್ಕೀಡುಮಾಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ಬಂದು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ದುರಂತದಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಕಟ್ಟಡ ಕುಸಿತದ ವೇಳೆ ಸಿಕ್ಕಿಬಿದ್ದಿದ್ದ ಎರಡು ಶ್ವಾನಗಳನ್ನು ರಕ್ಷಿಸಲಾಗಿದೆ. ಇಂದು ಕೂಡ ಕಟ್ಟಡ ಕುಸಿತದಲ್ಲಿ ಭಾರೀ ಅನಾಹುತ ತಪ್ಪಿದೆ. ಅಕ್ಕಪಕ್ಕದ ಕಟ್ಟಡಗಳಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.

ಕುಸಿತಗೊಂಡ ಕಟ್ಟಡ 50 ವರ್ಷದ ಹಳೆಯದ್ದಾಗಿದೆ. ನಾಳೆ ಕೆಎಂಎಫ್​ನಲ್ಲಿ ಸಿಎಂ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಟ್ಟಡದಲ್ಲಿ 18 ಕುಟುಂಬ ವಾಸವಾಗಿತ್ತು. ಕೆಎಂಎಫ್ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಕಟ್ಟಡ ಕುಸಿಯಲು ಆರಂಭವಾಗುತ್ತಿದ್ದಂತೆ ಮನೆಯಿಂದ ಹೊರ ಓಡಿದ್ದಾರೆ. ಇದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

No Comments

Leave A Comment