Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ದೇವಸ್ಥಾನದಲ್ಲಿ ಪೂಜೆ ಮಾಡುತ್ತಿದ್ದ ಅರ್ಚಕನ ಮನೆಯಲ್ಲಿ ಗಾಂಜಾ ಮಾರಾಟ : ಅರ್ಚಕ ಅರೆಸ್ಟ್

ಕಾರವಾರ : ಗಾಂಜಾ ಮಾರಾಟ ಮಾಡುತ್ತಿದ್ದ ಅರ್ಚಕನ ಮನೆಗೆ ದಾಳಿ ನಡೆಸಿ ಆರೋಪಿ ಅರ್ಚಕನನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕುಡಗುಂದ ಎಂಬಲ್ಲಿ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಮಾಯ್ನೇರ ಮನೆಯ ಚಂದ್ರಶೇಖರ ಭಟ್ ಬಂಧಿತ ಆರೋಪಿಯಾಗಿದ್ದು, ಈತ ಸ್ಥಳೀಯ ದೇವಸ್ಥಾನದ ಪೂಜೆ ಮಾಡಿಕೊಂಡಿದ್ದ ಎನ್ನಲಾಗಿದೆ.

ಒಂದು ಕಡೆಯಲ್ಲಿ ಪೂಜೆ ಮಾಡುತ್ತಿದ್ದ ಭಟ್ ಇನ್ನೊಂದು ಕಡೆಯಲ್ಲಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನುವ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿದ್ದು, ಈ ಆಧಾರದಲ್ಲಿ ಪೊಲೀಸರು ಆರೋಪಿಯ ಮನೆಗೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಇಡೀ ಮನೆಯನ್ನು ಜಾಲಾಡಿದರೂ ಗಾಂಜಾ ಸಿಕ್ಕಿರಲಿಲ್ಲ. ಆದರೆ, ಕೊನೆಗೆ ಆತನ ಅಡುಗೆ ಮನೆಗೆ ಸಿಬ್ಬಂದಿ ನುಗ್ಗಿದ್ದು, ಈ ವೇಳೆ ಮನೆಯ ಗ್ಯಾಸ್ ಕಟ್ಟೆಯ ಒಳಗಡೆ ಗಾಂಜಾ ಬಚ್ಚಿಟ್ಟಿರುವುದು ಬೆಳಕಿಗೆ ಬಂದಿದೆ. ಈ ವೇಳೆ ಆರೋಪಿಯ ಬಳಿಯಲ್ಲಿ 140 ಗ್ರಾಂ ಗಾಂಜಾ ಪತ್ತೆಯಾಗಿದೆ ಎನ್ನಲಾಗಿದೆ.

ಸಿದ್ದಾಪುರ ತಾಲೂಕಿನ ಮಾಯ್ನೇರ್‌ಮನೆ ಕುಗ್ರಾಮವಾಗಿದೆ. ಇಲ್ಲಿ ಈತ ತನ್ನ ಮನೆಯಲ್ಲಿಯೇ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನುವ ಬಗ್ಗೆ ಈ ಹಿಂದಿನಿಂದಲೂ ಅನುಮಾನಗಳಿದ್ದವು. ಮನೆಯ ಬಳಿ ಕೆಲವು ಕಾಲೇಜು ವಿದ್ಯಾರ್ಥಿಗಳು ಗಾಂಜಾ ಖರೀದಿಸಲು ಭೇಟಿ ನೀಡುವ ಮಾಹಿತಿ ಕೂಡಾ ಲಭಿಸಿತ್ತು. ಕೊನೆಗೆ ಖಚಿತ ಮಾಹಿತಿ ಪಡೆದು ಅಬಕಾರಿ ಅಧಿಕಾರಿಗಳು ದಾಳಿ ಮಾಡಿದ್ದರು.

No Comments

Leave A Comment