Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಬಾಲಕಿಯ ಅತ್ಯಾಚಾರ ಪ್ರಕರಣ : ಕಾರ್ಕಳದ ಓರ್ವನ ಸಹಿತ ಇಬ್ಬರ ಬಂಧನ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಗರ್ಭಿಣಿ ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಅತ್ಯಾಚಾರ ಪ್ರಕರಣ ಬಂಧಿತ ಆರೋಪಿಗಳು ಕಾರ್ಕಳದ ನಿವಾಸಿ ರವೀಂದ್ರ ಮತ್ತು ಬೆಳ್ತಂಗಡಿ ನಿವಾಸಿ ಯೋಗಿಶ್ ಎಂದು ತಿಳಿಯಲಾಗಿದೆ.

ಈ ಬಂಧಿತ ಆರೋಪಿಗಳು ಹತ್ತನೇ ತರಗತಿಯ ವಿದ್ಯಾರ್ಥಿನಿಯಾಗಿದ್ದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಆದ್ದರಿಂದ ಆಕೆ ಗರ್ಭಿಣಿಯಾಗಿದ್ದಾಳೆ.ನಂತರ ಬಾಲಕಿಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ.

10ನೇ ತರಗತಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ ಬಾಲಕಿಯ ಮೇಲೆ ಜೆಸಿಬಿ ಚಾಲಕನಾಗಿದ್ದ ರವೀಂದ್ರ ಐದು ಬಾರಿ ಅತ್ಯಚಾರವೆಸಗಿದ್ದ. ಇದಕ್ಕೂ ಮೊದಲು ಬಾಲಕಿ ಆಕೆಯ ಸಂಬಂಧಿ ಯೋಗೀಶ್​ನಿಂದ ಎರಡು ಬಾರಿ ಅತ್ಯಾಚಾರಕ್ಕೆ ಒಳಗಾಗಿದ್ದಳು ಎಂಬ ಮಾಹಿತಿ ತಿಳಿದುಬಂದಿದೆ.

ಶಾಲೆಗೆ ಆರೋಗ್ಯ ತಪಾಸಣೆಗೆ ಬಂದಿದ್ದ ವೈದ್ಯರಿಗೆ ವಿದ್ಯಾರ್ಥಿಯ ದೇಹಸ್ಥಿತಿ ನೋಡಿ ಅನುಮಾನ ಉಂಟಾಗಿತ್ತು. ಬಳಿಕ, ಬೆಳ್ತಂಗಡಿ ವೈದ್ಯರಲ್ಲಿ ಪರೀಕ್ಷಿಸಿದಾಗ ಬಾಲಕಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ಪೊಲೀಸರು ಬಾಲಕಿಯ ದೂರು ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರು ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.

No Comments

Leave A Comment