Log In
BREAKING NEWS >
ಮಾರ್ಚ್ 22ರ೦ದು ಚ೦ದ್ರಾಮಾನ ಯುಗಾದಿ ,ಏಪ್ರಿಲ್ 15ರ೦ದು ಸೌರಮಾನ ಯುಗಾದಿ ಹಬ್ಬವು ನಡೆಯಲಿದೆ.ಹಲವಾರು ಗಣ್ಯರು ಯುಗಾದಿ ಹಬ್ಬದ ಶುಭಾಶಯವನ್ನು ಕೋರಿರುತ್ತಾರೆ.....

ಉಡುಪಿ: ಗೋ ಹತ್ಯೆ ಖಂಡಿಸಿ ಪ್ರತಿಭಟನೆ; ಗಂಗೊಳ್ಳಿಯಲ್ಲಿ ಸ್ವಯಂಪ್ರೇರಿತವಾಗಿ ಸಂಪೂರ್ಣ ಬಂದ್

ಉಡುಪಿ: ಗೋ ಹತ್ಯೆಯನ್ನು ಖಂಡಿಸಿ ಗಂಗೊಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಇಂದು (ಅಕ್ಟೋಬರ್ 1) ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದಾರೆ. ಗಂಗೊಳ್ಳಿಯಲ್ಲಿ ಈ ಸಂಬಂಧ ಸ್ವಯಂಪ್ರೇರಿತವಾಗಿ ಸಂಪೂರ್ಣ ಬಂದ್ ಮಾಡಲಾಗಿದೆ.

ಗೊಂಗೊಳ್ಳಿಯ ಮೀನುಗಾರಿಕಾ ಬಂದರಿನಿಂದ ರಾಮಮಂದಿರದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದ್ದು, ಪ್ರಮುಖ ಬೀದಿಗಳ ಮೂಲಕ ಪ್ರತಿಭಟನಾ ಮೆರವಣಿಗೆ ಸಾಗಿ ಬರುತ್ತಿದೆ. ಗೋ ಹಂತಕರ ವಿರುದ್ಧ ಘೋಷಣೆ ಕೂಗುತ್ತಿರುವ ಪ್ರತಿಭಟನಾಕಾರರು, ಅಕ್ರಮ ಮಸೀದಿ ಮತ್ತು ಕಸಾಯಿಖಾನೆಗಳನ್ನು ಮುಚ್ಚಲು ಆಗ್ರಹಿಸಿದ್ದಾರೆ. ಶ್ರೀರಾಮ ಮಂದಿರದಲ್ಲಿ ಈ ಸಂಬಂಧ ಸಮಾರೋಪ ಕಾರ್ಯಕ್ರಮ ನಡೆಯಲಿದೆ.

ಗಂಗೊಳ್ಳಿ ವಿರೇಶ್ವರ ದೇವಸ್ಥಾನದಲ್ಲಿ‌ ಪ್ರತಿಭಟನಾ ಸಭೆ
ಗೋ ಹತ್ಯೆ ವಿರೋಧಿಸಿ ಮತ್ತು ಗೋ ಹಂತಕರನ್ನು ಗಡಿಪಾರು ಮಾಡಲು ಒತ್ತಾಯಿಸಿ ಗಂಗೊಳ್ಳಿಯಲ್ಲಿ ಹಿಂದು ಸಂಘಟನೆಗಳು ಇಂದು ಬೃಹತ್ ಪ್ರತಿಭಟನೆ ನಡೆಸಿತು. ಹಿಂದೂ ಜಾಗರಣ ವೇದಿಕೆ ಗಂಗೊಳ್ಳಿ ಘಟಕದ ವತಿಯಿಂದ ಗೋಹತ್ಯೆ ವಿರೋಧಿಸಿ ಕರೆ ನೀಡಿರುವ ಪ್ರತಿಭಟನೆಯಲ್ಲಿ ಸಾವಿರಾರು ಜನ ಭಾಗಿಯಾದರು. ಬೆಳಿಗ್ಗೆ ಪೋರ್ಟ್ ಆಫೀಸ್ ಬಳಿಯಿಂದ ಕಾಲ್ನಡಿಗೆ ಮೆರವಣಿಗೆ ಆರಂಭವಾಗಿ ರಾಮಮಂದಿರದ ತನಕ ಸಾಗಿತು. ಬಳಿಕ ಗಂಗೊಳ್ಳಿ ವಿರೇಶ್ವರ ದೇವಸ್ಥಾನದಲ್ಲಿ‌ ಪ್ರತಿಭಟನಾ ಸಭೆ ನಡೆಯಿತು.

ಪ್ರತಿಭಟನೆ ವೇಳೆ ಗೋಹತ್ಯೆಗೆ ಆರೋಪಿಗಳ‌ನ್ನು ಬಿಡುಗಡೆ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತವಾಯಿತು. ಗೋಹತ್ಯೆ ಆರೋಪಿಗಳನ್ನು ಗಡಿಪಾರಿಗೆ ಒತ್ತಾಯಿಸಲಾಯಿತು. ಪ್ರತಿಭಟನಾ ನಿರತರು ಗೋ ಕಳ್ಳರ ವಿರುದ್ಧ ಆಕ್ರೋಶದ ಘೋಷಣೆ‌ ಕೂಗಿದ್ದಾರೆ. ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದರು. ಗಂಗೊಳ್ಳಿ ಪೇಟೆ ಸ್ವಯಂಪ್ರೇರಿತವಾಗಿ ಬಂದ್ ಮಾಡಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

No Comments

Leave A Comment