Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಅ.7ರಿಂದ ನಾಡಹಬ್ಬ ದಸರಾ ಆಚರಣೆ: ಮೈಸೂರು ಮತ್ತು ರಾಜ್ಯದ ಇತರ ಭಾಗಗಳಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ನಾಡಹಬ್ಬ ದಸರಾ ಆರಂಭಕ್ಕೆ ಇನ್ನು ಎರಡೇ ದಿನ ಬಾಕಿ. ಸರ್ಕಾರದ ಮಟ್ಟದಲ್ಲಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಆಚರಣೆ ನಡೆಯಲಿದೆ. ಅಕ್ಟೋಬರ್ 7ರಂದು ಸಾಯಂಕಾಲ ಉದ್ಘಾಟನೆಯಾದರೆ 15ರಂದು ವಿಜಯದಶಮಿಗೆ ಮುಕ್ತಾಯವಾಗಲಿದ್ದು ಕೋವಿಡ್-19 ಸೋಂಕಿನ ಮಧ್ಯೆ ಎಚ್ಚರಿಕೆಯಿಂದ ಆಚರಣೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ದಸರಾ ಹಬ್ಬ ಆಚರಣೆಗೆ ಮೈಸೂರು ಮತ್ತು ರಾಜ್ಯದ ಬೇರೆ ಕಡೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಮೈಸೂರು ದಸರಾ ಆಚರಣೆಗೆ ಏನಿದೆ ಮಾರ್ಗಸೂಚಿಯಲ್ಲಿ?: ಅಕ್ಟೋಬರ್ 7ರಂದು ಸಂಜೆ ಚಾಮುಂಡಿ ಬೆಟ್ಟದಲ್ಲಿ ದಸರಾ ಹಬ್ಬಕ್ಕೆ ತಚಾಲನೆ, ಮೈಸೂರು ದಸರಾ ಉದ್ಘಾಟನೆಗೆ 100 ಜನರಿಗೆ ಅವಕಾಶ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 400 ಜನರ ಮಿತಿ, ದಸರಾದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ 1 ಡೋಸ್​ ಲಸಿಕೆ ಪಡೆದಿರಬೇಕು, ಹೊರಗಿನಿಂದ ಬರುವವರಿಗೆ RTPCR ಟೆಸ್ಟ್ ಕಡ್ಡಾಯ.

ಅರಮನೆ ಆವರಣದಲ್ಲಿ ದಸರಾ ನಡೆಯಬೇಕಾಗಿದ್ದು, ಜನರು ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಬೇಕು, ವರ್ಚುವಲ್ ಮೂಲಕ ಜಂಬೂ ಸವಾರಿಗೆ ವೀಕ್ಷಣೆ, ಕಾರ್ಯಕ್ರಮದಲ್ಲಿ 400ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ, ಅಕ್ಟೋಬರ್ 15ರಂದು ನಡೆಯುವ ಜಂಬೂ/ಪಂಜಿನ ಕವಾಯತಿಗೆ 500 ಜನರಿಗೆ ಮಾತ್ರ ಅವಕಾಶವಿದೆ. ದೈಹಿಕ ಅಂತರ ಇಲ್ಲದ ಕಾರ್ಯಕ್ರಮಗಳಿಗೆ ನಿಷೇಧ, ಪೊಲೀಸ್ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಸೂಚನೆ ಪಾಲಿಸಬೇಕು ಇತ್ಯಾದಿ ನಿಯಮಗಳು ಸರ್ಕಾರದ ಮಾರ್ಗಸೂಚಿಯಲ್ಲಿವೆ.

ಈ ಬಾರಿಯೂ ಸರಳ ದಸರಾ ಆಚರಣೆಗೆ ಅವಕಾಶವಿದ್ದು, ರಾಜ್ಯದ ಬೇರೆ ಕಡೆಗಳಲ್ಲಿ 400ಕ್ಕಿಂತ ಹೆಚ್ಚು ಜನರು ಒಮ್ಮೆಗೇ ಸೇರುವಂತಿಲ್ಲ. ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ.

No Comments

Leave A Comment