Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ದೀಪ ಪ್ರಜ್ವಲನೆಯೊ೦ದಿಗೆ ವಿದ್ಯುಕ್ತ ಚಾಲನೆ.......ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಗ್ರಾಹಕರಿಗೆ ಮತ್ತಷ್ಟು ಶಾಕ್: ಅಡುಗೆ ಅನಿಲ ಸಿಲಿಂಡರ್ ದರ 15 ರೂ. ಏರಿಕೆ; ಇಂದಿನಿಂದ ಹೊಸ ಬೆಲೆ ಜಾರಿ

ನವದೆಹಲಿ: ಪೆಟ್ರೋಲಿಯಂ ಕಂಪೆನಿಗಳು ಇಂಧನ ಬೆಲೆ ಏರಿಕೆ ಮಾಡುತ್ತಿದ್ದಂತೆ ಅಡುಗೆ ಅನಿಲ ಸಿಲಿಂಡರ್ ದರವನ್ನು ಕೂಡ ಬುಧವಾರ 15 ರೂಪಾಯಿ ಏರಿಕೆ ಮಾಡಿವೆ. ನೂತನ ದರ ದೇಶಾದ್ಯಂತ ಇಂದೇ ಜಾರಿಗೆ ಬರಲಿದೆ.

ಈ ಮೂಲಕ ಸಬ್ಸಿಡಿಯೇತರ ಅಡುಗೆ ಅನಿಲ ಸಿಲಿಂಡರ್ ದರ ರಾಜಧಾನಿ ದೆಹಲಿಯಲ್ಲಿ 14.2 ಕೆಜಿಗೆ 899 ರೂಪಾಯಿ 50 ಪೈಸೆಯಾಗಿದೆ. 5 ಕೆಜಿ ಸಿಲಿಂಡರ್ ಬೆಲೆ 502 ರೂಪಾಯಿಯಾಗಿದೆ.

ಕಳೆದ ಅಕ್ಟೋಬರ್ 1ರಂದು ಪೆಟ್ರೋಲಿಯಂ ಕಂಪೆನಿಗಳು ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 43 ರೂಪಾಯಿ 5 ಪೈಸೆಯಷ್ಟು ಹೆಚ್ಚಳ ಮಾಡಿದ್ದವು. ಇದೀಗ ಅಡುಗೆ ಅನಿಲ ಸಿಲಿಂಡರ್ ದರವನ್ನು ಕೂಡ ಹೆಚ್ಚಿಸುವ ಮೂಲಕ ಗ್ರಾಹಕರಿಗೆ ಮತ್ತಷ್ಟು ಶಾಕ್ ನೀಡಿದೆ. ಕಳೆದ ಎರಡು ತಿಂಗಳಲ್ಲಿ ಅಡುಗೆ ಅನಿಲ ಏರಿಕೆಯಾಗುತ್ತಿರುವುದು ಇದು ನಾಲ್ಕನೇ ಬಾರಿ.

No Comments

Leave A Comment