Log In
BREAKING NEWS >
ಮಾರ್ಚ್ 22ರ೦ದು ಚ೦ದ್ರಾಮಾನ ಯುಗಾದಿ ,ಏಪ್ರಿಲ್ 15ರ೦ದು ಸೌರಮಾನ ಯುಗಾದಿ ಹಬ್ಬವು ನಡೆಯಲಿದೆ.ಹಲವಾರು ಗಣ್ಯರು ಯುಗಾದಿ ಹಬ್ಬದ ಶುಭಾಶಯವನ್ನು ಕೋರಿರುತ್ತಾರೆ.....

ಬೆಂಗಳೂರು ಸೇರಿ ರಾಜ್ಯಾದ್ಯಂತ ಅ.10 ರವರೆಗೂ ಮಳೆ ಮುಂದುವರಿಕೆ ಸಾಧ್ಯತೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನಿನ್ನೆ ರಾತ್ರಿಯಿಂದ ಸುರಿದ ಮಳೆ ಇಂದು ಮುಂಜಾನೆವರೆಗೂ ಮುಂದುವರೆಯಿತು.

ನಿನ್ನೆ ರಾತ್ರಿಯಿಂದ ಬೆಂಗಳೂರಿನ ಬಹುತೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ತಡರಾತ್ರಿ ಆರಂಭವಾದ ಮಳೆ ಆರ್ಭಟ ಇಂದು ಮುಂಜಾನೆವರೆಗೂ ಮುಂದುವರೆಯಿತು. ನಗರದ ಬಸವನಗುಡಿ, ಮಲ್ಲೇಶ್ವರಂ, ರಾಜಾಜಿನಗರ, ಆರ್​ಆರ್​ ನಗರ, ಹೆಬ್ಬಾಳ, ಯಲಹಂಕ, ಎಲೆಕ್ಟ್ರಾನಿಕ್ ಸಿಟಿ, ಕೋರಮಂಗಲ, ಬನಶಂಕರಿ, ಪದ್ಮನಾಭನಗರ, ಹನುಮಂತನಗರ, ಗಿರಿನಗರ, ಚಾಮರಾಜಪೇಟೆ ಸೇರಿದಂತೆ ಹಲವೆಡೆ ಮಳೆ ಸುರಿದಿದೆ.

ಇದರಿಂದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ನದಿಯಂತಾದ ರಸ್ತೆಗಳಲ್ಲಿ ಸಂಚರಿಸಲಾಗದೆ ವಾಹನ ಸವಾರರು ಪರದಾಡಿದರು. ಅಲ್ಲದೆ ಮುಂಜಾನೆವರೆಗೂ ಸುರಿದ ಮಳೆರಾಯ ಇಂದು ಬೆಳಗ್ಗೆ ಕೊಂಚ ಬ್ರೇಕ್ ಕೊಟ್ಟಿದ್ದನಾದರೂ ಕೊಂಚ ಬಿಡುವಿನ ನಂತರ ಮತ್ತೆ ತನ್ನ ಆರ್ಭಟ ಮುಂದುವರೆಸಿದ್ದಾನೆ. ಪರಿಣಾಮ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ. ಮಳೆಯಿಂದ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮರಗಳು ಬಿದ್ದಿದ್ದು, ಇನ್ನು ಕೆಲವೆಡೆ ಮನೆ, ಅಪಾರ್ಟ್​ಮೆಂಟ್​ಗಳಿಗೆ ನೀರು ನುಗ್ಗಿದೆ.

ಅಕ್ಟೋಬರ್ 10ರವರೆಗೂ ಮಳೆ ಆರ್ಭಟ: ಹವಾಮಾನ ಇಲಾಖೆ
ಇನ್ನು ಇದೇ ಅಕ್ಚೋಬರ್ 10ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನ ಸುತ್ತಮುತ್ತ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಷಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಷಿಯಸ್ ಉಷ್ಣಾಂಶ ದಾಖಲಾಗಲಿದೆ. ಇಂದು ಸಂಜೆಯವರೆಗೂ ಮಳೆ ಮುಂದುವರೆಯುವ ಸಾಧ್ಯತೆಯಿದೆ.

ದಕ್ಷಿಣ ಭಾರತದ ಕಡೆ ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ 4 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಪ್ರಾಕೃತಿಕ ಮತ್ತು ನೈಸರ್ಗಿಕ ವಿಕೋಪ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.  ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಹೆಚ್ಚಿದೆ. ಸ್ವಲ್ಪ ಸಮಯ ಮಳೆ ಕಡಿಮೆಯಾಗಿ, ಸ್ವಲ್ಪ ಸಮಯ ಮಳೆ ಜಾಸ್ತಿ ಆಗಬಹುದು ಎಂದು ಹೇಳಿದ್ದಾರೆ.

No Comments

Leave A Comment