Log In
BREAKING NEWS >
ಮಾರ್ಚ್ 22ರ೦ದು ಚ೦ದ್ರಾಮಾನ ಯುಗಾದಿ ,ಏಪ್ರಿಲ್ 15ರ೦ದು ಸೌರಮಾನ ಯುಗಾದಿ ಹಬ್ಬವು ನಡೆಯಲಿದೆ.ಹಲವಾರು ಗಣ್ಯರು ಯುಗಾದಿ ಹಬ್ಬದ ಶುಭಾಶಯವನ್ನು ಕೋರಿರುತ್ತಾರೆ.....

ಮಂಗಳೂರು ದಸರಾಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಸಂಭ್ರಮದ ಚಾಲನೆ

ಮಂಗಳೂರು, ಅ.07: ಇಂದಿನಿಂದ ವಿಶ್ವವಿಖ್ಯಾತ ಮಂಗಳೂರು ದಸರಾ ಆರಂಭವಾಗಿದ್ದು, ನಗರದ ಗೋಕರ್ಣನಾಥ ಕುದ್ರೋಳಿ ಕ್ಷೇತ್ರ, ಮಂಗಳಾದೇವಿ ಕ್ಷೇತ್ರ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಚಾಲನೆ ನೀಡಲಾಯಿತು.

ಮಂಗಳೂರು ದಸರಾ ಉತ್ಸವಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆ ನೀಡಿದರು.

ಇಂದಿನಿಂದ ಅ.16ರವರೆಗೆ ನಡೆಯಲಿರುವ ನವರಾತ್ರಿ ಉತ್ಸವದ ಅಂಗವಾಗಿ ಕುದ್ರೋಳಿ ಕ್ಷೇತ್ರದಲ್ಲಿ ನವ ದುರ್ಗೆಯರು, ಗಣಪತಿ ಹಾಗೂ ಶಾರದಾ ಮಾತೆಯ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಯಿತು.

ಇನ್ನು ಕುದ್ರೋಳಿ ಕ್ಷೇತ್ರದ ಅಂಗಣದಲ್ಲಿ ಮೂರ್ತಿಗಳ ಪ್ರದಕ್ಷಿಣೆ ನಡೆಸಿ ಬಳಿಕ ದಸರಾ ದರ್ಬಾರು ಮಂಟಪದಲ್ಲಿ ಮೂರ್ತಿಗಳ ಪ್ರತಿಷ್ಠಾಪನೆಯನ್ನು ಧಾರ್ಮಿಕ ವಿಧಿ ವಿಧಾನಗಳ ಮೂಲಕ ನಡೆಸಲಾಯಿತು.

ಈ ವೇಳೆ ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಕ್ಷೇತ್ರಾಡಳಿತ ಸಮಿಯ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಮೂಡ ಅಧ್ಯಕ್ಷ ರವಿಶಂಕರ ಮಿಜಾರು, ಹರಿಕೃಷ್ಣ ಬಂಟ್ವಾಳ, ಶಶಿಧರ ಹೆಗ್ಡೆ, ಪದ್ಮ ರಾಜ್ ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment