ಬೆಂಗಳೂರು: ರಸ್ತೆಗುಂಡಿ ತಪ್ಪಿಸಲು ಹೋಗಿ ಅಪಘಾತ; 48 ಗಂಟೆಗಳಲ್ಲಿ ಮತ್ತೊಂದು ಸಾವು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಹಿಳೆ ಒಬ್ಬರು ರಸ್ತೆಗುಂಡಿ ತಪ್ಪಿಸಲು ಹೋಗಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ನಗರದ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ಒಂದೇ ಕುಟುಂಬದ ಮೂವರು ಚಲಿಸುತ್ತಿದ್ದರು. ಈ ವೇಳೆ ರಸ್ತೆ ಮಧ್ಯೆಯಿದ್ದ ಗುಂಡಿ ತಪ್ಪಿಸಲು ಹೋಗಿ, ಮಹಿಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಟಿಪ್ಪರ್ ಲಾರಿಯೊಂದು ಮಹಿಳೆ ಮೇಲೆಯೇ ಹರಿದಿದ್ದು, ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೈಕ್ ನಲ್ಲಿದ್ದ ಮತ್ತಿಬ್ಬರಿಗೂ ಗಂಭೀರ ಗಾಯಗೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊನ್ನೆ ಇದೇ ರಸ್ತೆಯಲ್ಲಿ ಟಿಪ್ಪರ್ ಹರಿದು ಪೊಲೀಸ್ ಪೇದೆಯೊಬ್ಬರು ಮೃತಪಟ್ಟಿದ್ದರು. ಇದೀಗ ಮತ್ತೊಂದು ಅವಘಡ ಸಂಭವಿಸಿದೆ.