Log In
BREAKING NEWS >
ಡಿಸೆ೦ಬರ್ 08 ರಿ೦ದ ಡಿಸೆ೦ಬರ್ 15ರವರೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 93ನೇ ಭಜನಾ ಸಪ್ತಾಹಮಹೋತ್ಸವವು ಜರಗಲಿದೆ- ಪ್ರತಿ ನಿತ್ಯವೂ ಪೇಟೆ ಉತ್ಸವ,ತೊಟ್ಟಿಲ ಸೇವೆ,ಕಾಕಡಾರತಿ ಕಾರ್ಯಕ್ರಮವು ಜರಗಲಿದೆ....

ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ನಿಧನ: ಮಧ್ಯಾಹ್ನ ಅಂತ್ಯಕ್ರಿಯೆ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ (72) ಅ.09 ರಂದು ತಡರಾತ್ರಿ 2 ಗಂಟೆಗೆ ನಿಧನರಾಗಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದರು.

ಸತ್ಯಜಿತ್ ಪೊಲೀಸ್ ಲಾಕ್ ಅಪ್, ನಮ್ಮೂರ ಹಮ್ಮೀರ ಸೇರಿ 600 ಕ್ಕೂ ಹೆಚ್ಚು ಚಿತ್ರದಲ್ಲಿ ನಟಿಸಿದ್ದಾರೆ.

ಮೃತದೇಹವನ್ನು ಈಗ ಹೆಗಡೆನಗರದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದ್ದು ಬೆಳಿಗ್ಗೆ 8 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು ಮಧ್ಯಾಹ್ನ 3 ಗಂಟೆಗೆ ಹೆಗಡೆ ನಗರದ ಖಬರ್ ಸ್ಥಾನ್ ದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.

ವೃತ್ತಿಯಲ್ಲಿ ಬಸ್ ಚಾಲಕರಾಗಿದ್ದ ಸತ್ಯಜಿತ್ ನಟನೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ಅನೇಕ ಊರುಗಳಿಗೆ ತೆರಳಿ ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. ಇದೇ ಮುಂದೆ ಅವರ ಬಣ್ಣದ ಬದುಕಿಗೆ ದಾರಿಮಾಡಿಕೊಟ್ಟಿತು.

ಸತ್ಯಜಿತ್ ಅವರ ನಿಜವಾದ ಹೆಸರು ಸಯ್ಯದ್ ನಿಜಾಮುದ್ದೀನ್ 

ಸಯ್ಯದ್ ನಿಜಾಮುದ್ದೀನ್ ಚಿತ್ರರಂಗಕ್ಕೆ ಪ್ರವೇಶಿಸಿದ ಬಳಿಕ ತಮ್ಮ ಹೆಸರನ್ನು ಸಯ್ಯದ್ ನಿಜಾಮುದ್ದೀನ್ ಎಂದು ಬದಲಾಯಿಸಿಕೊಂಡಿದ್ದರು. ಮುಂಬೈ ನಲ್ಲಿ ನಾಟಕ ಪ್ರದರ್ಶನ ನೀಡಿದಾಗ ಸತ್ಯಜಿತ್ ಅವರಿಗೆ ನಾನಾ ಪಾಟೇಕರ್ ಅವರ ಪರಿಚಯವಾಗಿ ಬಾಲಿವುಡ್ ನಲ್ಲೂ ಸತ್ಯಜಿತ್ ನಟಿಸಿದ್ದರು.

No Comments

Leave A Comment