Log In
BREAKING NEWS >
ನ. 21ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ "ವಿಶ್ವರೂಪದರ್ಶನ"ಜರಗಲಿದೆ...

ಅ.13ರ೦ದು ಅದಮಾರು ನೂತನ “ಪೂರ್ಣಪ್ರಜ್ಞ ಪದವಿ ಕಾಲೇಜಿನ ನೂತನ ಕಟ್ಟಡಕ್ಕೆ ಹಾಗೂ ಉಡುಪಿಯ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಸಮುಚ್ಚಯ ಶಿಲಾನ್ಯಾಸ ಹಾಗೂ ಗಣಕ ವಿಜ್ಞಾನ ಪ್ರಯೋಗಾಲದ ಉದ್ಟಾಟನೆ

ಅಕ್ಟೋಬರ್ 13ರ೦ದು ಅದಮಾರು ನೂತನ “ಪೂರ್ಣಪ್ರಜ್ಞ ಪದವಿ ಕಾಲೇಜಿನ ನೂತನ ಕಟ್ಟಡಕ್ಕೆ ಹಾಗೂ ಉಡುಪಿಯ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಸಮುಚ್ಚಯ ಶಿಲಾನ್ಯಾಸ ಹಾಗೂ ಗಣಕ ವಿಜ್ಞಾನ ಪ್ರಯೋಗಾಲದ ಉದ್ಟಾಟನೆ

ಉಡುಪಿ: ಪೂರ್ಣಪ್ರಜ್ಞ, ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ಶ್ರೀ ವಿಬುಧೇಶತೀರ್ಥ ಶ್ರೀಪಾದರು ದೇಶದಾದ್ಯಂತ 33 ಗುಣಮಟ್ಟದ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, ಶಿಕ್ಷಣ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆಗಳನ್ನು ನೀಡಿದ್ದಾರೆ. ಗುರುಗಳು ತೋರಿಸಿದ ಮಾರ್ಗದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸಿದ ಅವರ ಶಿಷ್ಯರೂ ಈಗಿನ ಅಧ್ಯಕ್ಷರಾದ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರು ಸಂಸ್ಥೆಗಳನ್ನು ಉನ್ನತಿಕರಿಸಿ ಈ ಸಂಖ್ಯೆಯನ್ನು 39ಕ್ಕೇರಿಸಿದರು. ಇದೀಗ 49ನೇ ಸಂಸ್ಥೆಯಾಗಿ ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಸಂಸ್ಥೆಗಳ ಮೂಲ ಸಂಸ್ಥಾನವಾದ ಅದಮಾರಿನಲ್ಲಿ “ಪೂರ್ಣಪಜ್ಜ ಪದವಿ ಕಾಲೇಜಿ”ಗೆ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರಿಂದ 13-10-2021 ಬುಧವಾರ ಪೂರ್ವಾಪ್ತ 11 ಗಂಟೆಗೆ ಶಿಲಾನ್ಯಾಸವನ್ನು ನೆರವೇರಿಸಲಿದ್ದಾರೆ.

1950 ರಲ್ಲಿ ಶ್ರೀ ವಿಬುಧೇಶ ತೀರ್ಥಶ್ರೀಪಾದರು ಅದಮಾರಿನಲ್ಲಿ ಕನ್ನಡ ಮಾಧ್ಯಮ ಪ್ರೌಢಶಾಲೆಯನ್ನು ಮೊದಲ ಸಂಸ್ಥೆಯಾಗಿ ಸ್ಥಾಪಿಸಿದರು. 1972 ರಲ್ಲಿ ಅದಮಾರಿನಲ್ಲಿ ಪದವಿಪೂರ್ವ ಕಾಲೇಜನ್ನು ಆರಂಭಿಸಿ ಕಲೆ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ಶಿಕ್ಷಣ ನೀಡಲು ಮುಂದಾದರು. ಶ್ರೀ ವಿಬುಧೇಶತೀರ್ಷರು 2007 ರಲ್ಲಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯನ್ನು ಆದಮಾರಿನಲ್ಲಿ ಆರಂಭಿಸಿ, ಗ್ರಾಮೀಣ ಮಕ್ಕಳ ವಿದ್ಯಾರ್ಜನೆಗೆ ಮತ್ತೊಂದು ಅವಕಾಶ ಮಾಡಿಕೊಟ್ಟರು.

2016 ರಲ್ಲಿ ಅವರ ಶಿಷ್ಯರಾದ ಶ್ರೀ ವಿಶ್ವಪ್ರಿಯತೀರ್ಥರು. ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, 2010 ರಲ್ಲಿ ಸುಸಜ್ಜಿತ ನೂತನ ಕಟ್ಟಡವನ್ನು ಈ ಸಂಸ್ಥೆಗೆ ಸಮರ್ಪಿಸಿದರು.

ಇದೀಗ ವಾಣಿಜ್ಯ ಹಾಗೂ ಬಿಸಿಎ (B.Com BCA) ಕೋರ್ಸುಗಳೊಂದಿಗೆ ಪದವಿ ಕಾಲೇಜನ್ನು ಶ್ರೀಪಾದರು. ಆರಂಭಿಸಲು ನಿರ್ಧರಿಸಿದ್ದು, 40 ನೇ ಸಂಸ್ಥೆಯಾಗಿ ರೂಪುಗೊಳ್ಳಲಿದೆ. ಗಾಮೀಣ ಪ್ರದೇಶವಾದ ಅದಮಾರಿನಲ್ಲಿ ಪ್ರಾಥಮಿಕ ಪೂರ್ವದಿಂದ ಪದವಿಯ ತನಕವೂ ವ್ಯಾಸಂಗ ಮಾಡಲು ವಿದ್ಯಾರ್ಥಿಗಳಿಗೆ ಅನುವು ಮಾಡಿಕೊಡಲಾಗಿದೆ. ಈಗಗಾಲೇ ಸುಮಾರು ರೂ. 17 ಕೋಟಿಯಷ್ಟು ವೆಚ್ಚ ಭರಿಸಿ ದೂರದೂರಿನಿಂದ ಆಗಮಿಸುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ವಸತಿ ಸೌಕರ್ಯವನ್ನೂ ಕಲ್ಪಿಸಲಾಗಿದೆ.

ಸಭಾಕಾರ್ಯಕ್ರಮ – ಅದಮಾರು

ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು 13-10-2021 ಬುಧವಾರ: ಪೂರ್ವಾಹ್ನ 11ಗಂಟೆಗೆ ಪೂರ್ಣಪ್ರಜ್ಞ ಪದವಿ ಕಾಲೇಜಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಅದಮಾರು ಕಾಲೇಜಿನ ಶ್ರೀ ವಾಸುದೇವ ಸಭಾಭವನದಲ್ಲಿ ಸಭಾಕಾರ್ಯಕ್ರಮ ನಡೆಯಲಿದ್ದು, ಪೂಜ್ಯರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಿ ಆಶೀರ್ವಚಿಸಲಿದ್ದಾರೆ. ಸಮಾರ೦ಭದ ಮುಖ್ಯ ಅಭ್ಯಾಗತರಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ, ಕನ್ನಡ ಸಂಸ್ಕೃತಿ ಹಾಗೂ ಇಂಧನ ಸಚಿವರೂ ಆಗಿರುವ ವಿ. ಸುನಿಲ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಸಚಿವರೂ ಆಗಿರುವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಕೆ. ರಘುಪತಿ ಭಟ್ ಕಾಪು ಶಾಸಕ ಲಾಲಾಜಿ ಆರ್.ಮಂಡನೆ, ಅವರ್ಶ ಆಸತ್ರೆಯ ಆಡಳಿತ ನಿರ್ದೇಶಕ ಡಾ.ಜಿ.ಎಸ್, ಚಂದ್ರಶೇಖರ್ ಭಾಗವಹಿಸಲಿದ್ದಾರೆ.
ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಪ್ರದೀಪ್ ಕುಮಾರ್, ಪೂರ್ಣಪ್ರಜ್ಞ ಪದವಿ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಪೈ, ಉಪಪ್ರಾ೦ಶುಪಾಲರಾದ ಡಾ.ಒಲ್ವಿಟಾ ಡಿ’ಸೋಜ ಮೊದಲಾದವರು ಉಪಸ್ಥಿತರಿರುವರೆ೦ದು ಪತ್ರಿಕಾಪ್ರಕಟಣೆಯಲ್ಲಿ ತಿಳಿಸಿದ್ದಾರೆ.

13-10-2021 ಬುಧವಾರ ಅಪರಾಹ್ನ 12:30 ಸಭಾ ಕಾರ್ಯಕ್ರಮ ಸ್ಥಳ: ಪೂರ್ಣಪ್ರಜ್ಞ ಆಡಿಟೋರಿಯಂ, ಉಡುಪಿ

ಉಡುಪಿಯ ಪೂರ್ಣಪ್ರಜ್ಞ ಪದವಿ ಕಾಲೇಜಿನ ನೂತನ ವಿಜ್ಞಾನ ಸಮುಚ್ಚಯಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಹಾಗೂ ಉಡುಪಿಯ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ನೂತನ ಗಣಕವಿಜ್ಞಾನದ ಪ್ರಯೋಗಾಲಯದ ಉದ್ಘಾಟನೆಯೂ ಮಾನ್ಯ ಮುಖ್ಯಮಂತ್ರಿಗಳಿಂದ ನೆರೆವೇರಲಿದೆ.

ಉಡುಪಿಯ ಪೂರ್ಣ ನಡೆಯಲಿರುವ ಸಭಾಕಾರ್ಯಕ್ರಮದಲ್ಲಿ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಿ ಆಶೀರ್ವಚಿಸಲಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಮುಖ್ಯ ಅಭ್ಯಾಗತರಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ, ಕನ್ನಡ ಸಂಸ್ಕೃತಿ ಹಾಗೂ ಇಂಧನ ಸಚಿವರೂ ಆಗಿರುವ ವಿ ಸುನೀಲ್ ಕುಮಾರ್, ಹಿಂದುಳಿದ ವರ್ಗಗಳ ಕಾಲ ಹಾಗೂ ಪಂಜ ಕಲ್ಯಾಣ ಸಚಿವರೂ ಆಗಿರುವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಕೆ. ರಘುಪತಿ ಭಟ್ ಆಗಮಿಸಲಿದ್ದಾರೆ. ಸಭಾ ಕಾರ್ಯಕ್ರಮದಲ್ಲಿ ಉಡುಪಿ ಅದಮಾರು ಮಠದ ಶಿಕ್ಷಣ ಮಂಡಳಿಯ ಗೌರವ ಕಾರ್ಯದರ್ಶಿ ಡಾ. ಶ್ರೀಹರಿ ,ಪೂರ್ಣ ಪ್ರಜ್ಞ ಪದವಿ ಕಾಲೇಜಿನ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಹಾಗೂ ಆದರ್ಶ ಆಸತ್ರೆಯ ಆಡಳಿತ ನಿರ್ದೇಶಕರೂ ಡಾ.ಜಿ.ಎಸ್.ಚಂದ್ರಶೇಖರ, ನ್ಯಾಯವಾದಿ ಹಾಗೂ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ಗೌರವ ಕಾರ್ಯದರ್ಶಿಗಳಾದ ಪ್ರದೀಪ್ ಕುಮಾರ್ ಮೊದಲಾದವರು ಉಪಸ್ಥಿತರಿರಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿರುವ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು. ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಹಾಗೂ ನ್ಯಾಯವಾದಿಗಳಾದ ಪ್ರದೀಪ್ ಕುಮಾರ್ , ಪೂರ್ಣ ಪ್ರಜ್ಞ ಪದವಿಪೂರ್ವ ಕಾಲೇಜಿನ ಗೌರವ ಕೋಶಾಧಿಕಾರಿಗಳಾದ ಪ್ರವೀಣ್ ಕುಮಾರ್, ಅದಮಾರು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಪೈ, ಅದಮಾರು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲೆ ಡಾ.ಒಲ್ವಿಟಾ ಡಿ’ ಸೋಜಾ, ಉಡುಪಿ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಪ್ರತಿಮಾ ಬಾಳಿಗ, ಉಡುಪಿ ಪೂರ್ಣ ಪ್ರಜ್ಞ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ಗುರುರಾಜ, ಉಡುಪಿ ಪೂರ್ಣ ಪ್ರಜ್ಞ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಘವೇಂದ್ರ ಎ, ಉಡುಪಿ ಪೂರ್ಣಪ್ರಜ್ಞ ಪದವಿ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಪ್ರಕಾಶ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment