Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಚಾಮುಂಡಿ ಬೆಟ್ಟದಿಂದ ಅರಮನೆ ತಲುಪಿದ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯ ಚಿನ್ನದ ಅಂಬಾರಿಯಲ್ಲಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಅರಮನೆ ತಲುಪಿದೆ.

ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಅರಮನೆಗೆ ನಾದಸ್ವರ, ಕಲಾತಂಡದೊಂದಿಗೆ ಅಂಬಾರಿ ಉತ್ಸವ ಮೂರ್ತಿಯನ್ನು ತರಲಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹಾಗೂ ಇತರ ಗಣ್ಯರು, ದೇವಿಯ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ಶ್ರೀಚಾಮುಂಡೇಶ್ವರಿ ಉತ್ಸವ ಮೂರ್ತಿ ತರುವ ಅಲಂಕೃತ ವಾಹನದೊಂದಿಗೆ ನಾದಸ್ವರ ತಂಡ, ಪೊಲೀಸ್ ಬ್ಯಾಂಡ್, ಅಶ್ವದಳ, ಭಜನಾ ತಂಡ, ವೇದಘೋಷ, ಚಂಡೆ, ನವದುರ್ಗೆಯರು ಸಾಗುವರು. ತಾವರಕಟ್ಟೆ, ಇಟ್ಟಿಗೆಗೂಡು, ಹಾರ್ಡಿಂಚ್ ವೃತ್ತದ ಮೂಲಕ ಅರಮನೆ ಪ್ರವೇಶಿಸಿತು.

ಇದಕ್ಕೂ ಮುನ್ನ ಚಾಮುಂಡಿ ಬೆಟ್ಟದ ದೇವಸ್ಥಾನದಿಂದ ಹೊರಟ ಚಾಮುಂಡಿ ತಾಯಿಯ ಮೂರ್ತಿ ಮೆರವಣಿಗೆಯನ್ನು ನೂರಾರು ಭಕ್ತರು ಕಣ್ತುಂಬಿಕೊಂಡರು, ಚಾಮುಂಡಿ ಬೆಟ್ಟದಿಂದ ತಾವರೆಕಟ್ಟೆ ಗ್ರಾಮಕ್ಕೆ ಚಾಮುಂಡೇಶ್ವರಿ ವಿಗ್ರಹದ ಮೆರವಣಿಗೆ ಬರುತ್ತಿದ್ದಂತೆಯೇ ಸ್ಥಳೀಯರು, ಪಟಾಕಿ ಸಿಡಿಸಿ ಸಂಭ್ರಮದಿಂದ ಬರಮಾಡಿಕೊಂಡರು.

No Comments

Leave A Comment