Log In
BREAKING NEWS >
ಡಿಸೆ೦ಬರ್ 08 ರಿ೦ದ ಡಿಸೆ೦ಬರ್ 15ರವರೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 93ನೇ ಭಜನಾ ಸಪ್ತಾಹಮಹೋತ್ಸವವು ಜರಗಲಿದೆ- ಪ್ರತಿ ನಿತ್ಯವೂ ಪೇಟೆ ಉತ್ಸವ,ತೊಟ್ಟಿಲ ಸೇವೆ,ಕಾಕಡಾರತಿ ಕಾರ್ಯಕ್ರಮವು ಜರಗಲಿದೆ....

ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ: ಕಣ್ತುಂಬಿಕೊಂಡ ಭಕ್ತಾದಿಗಳು

ಕೊಡಗು: ತುಲಾ ಸಂಕ್ರಮಣದ ದಿನ (ಅ.17 ರಂದು) ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವವಾಗಿದ್ದು ಭಕ್ತಾದಿಗಳು ಅಪರೂಪದ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ.

ಮಕರ ಲಗ್ನದಲ್ಲಿ ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ತೀರ್ಥೋದ್ಭವಾಗಿದ್ದು, ಇದಕ್ಕೂ ಮುನ್ನ ಅರ್ಚಕ ಗುರುರಾಜಾಚಾರ್ ನೇತೃತ್ವದಲ್ಲಿ 6 ಮಂದಿ ಅರ್ಚಕರು ಬ್ರಹ್ಮಕುಂಡಿಕೆಗೆ ಪೂಜೆ ಸಲ್ಲಿಸಿದ್ದರು.

ಮಧ್ಯಾಹ್ನ 1:11 ಕ್ಕೆ ಕಾವೇರಿ ಉದ್ಭವಾಗಿದ್ದು ಸಹಸ್ರಾರು ಮಂದಿ ತೀರ್ಥ ಪಡೆದು ಪುನೀತರಾಗಿದ್ದಾರೆ. ಕೋವಿಡ್-19 ನಿರ್ಬಂಧದ ನಡುವೆಯೂ ಕಾವೇರಿ ತೀರ್ಥೋದ್ಭವವನ್ನು ಕಣ್ತುಂಬಿಕೊಳ್ಳುವುದಕ್ಕೆ ನೆರೆದಿದ್ದರು.

ಕಾವೇರಿ ತೀರ್ಥೋದ್ಭವದ ಹಿನ್ನೆಲೆಯಲ್ಲಿ ಹಲವಾರು ಭಕ್ತಾದಿಗಳು ಸಂಗಮದಲ್ಲಿ ಸ್ನಾನ ಮಾಡಿದರು. ಬ್ರಹ್ಮಕುಂಡಿಕೆಯಲ್ಲಿ ತೀರ್ಥೋದ್ಭವಾಗುತ್ತಿದ್ದಂತೆಯೇ ತೀರ್ಥವನ್ನು ಭಕ್ತಾದಿಗಳಿಗೆ ಪ್ರೋಕ್ಷಣೆ ಮಾಡಿ ಸಂಭ್ರಮಿಸಲಾಯಿತು.

No Comments

Leave A Comment