Log In
BREAKING NEWS >
ಮಾರ್ಚ್ 22ರ೦ದು ಚ೦ದ್ರಾಮಾನ ಯುಗಾದಿ ,ಏಪ್ರಿಲ್ 15ರ೦ದು ಸೌರಮಾನ ಯುಗಾದಿ ಹಬ್ಬವು ನಡೆಯಲಿದೆ.ಹಲವಾರು ಗಣ್ಯರು ಯುಗಾದಿ ಹಬ್ಬದ ಶುಭಾಶಯವನ್ನು ಕೋರಿರುತ್ತಾರೆ.....ಮಾ.21,22 ಕಾಪು ಸುಗ್ಗಿ ಮಾರಿಪೂಜೆ ದಿನ ನಿಗದಿ....

ಉಡುಪಿಯಲ್ಲಿ ದುರ್ಗಾ ದೌಡ್ : ಪ್ರಕರಣ ದಾಖಲು

ಉಡುಪಿ: ಅನುಮತಿ ಇಲ್ಲದೆ ಕೋವಿಡ್ ನಿಯಮ ಉಲ್ಲಂಘಿಸಿ ಅ.15ರಂದು ಉಡುಪಿಯಲ್ಲಿ ನಡೆದ ‘ದುರ್ಗಾ ದೌಡ್’ ಕಾರ್ಯಕ್ರಮ ಆಯೋಜಿಸಿದ ಉಡುಪಿ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಪ್ರಮುಖರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.

ಪೂರ್ವಾನುಮತಿಯಿಲ್ಲದೆ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಿಂದ ಅಂಬಲಪಾಡಿ ಮಹಾಕಾಳಿ ದೇವಸ್ಥಾನದವರೆಗೆ ಪಾದಯಾತ್ರೆ ಯನ್ನು ನಡೆಸಿ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಬಗ್ಗೆ ಸರಕಾರ/ಜಿಲ್ಲಾಧಿಕಾರಿಯವರ ಆದೇಶವನ್ನು ಉಲ್ಲಂಘನೆ ಮಾಡಿರುವುದಾಗಿ ಉಡುಪಿ ನಗರಸಭೆ ಪೌರಾಯುಕ್ತ ಹಾಗೂ ಕೋವಿಡ್ ನೋಡೆಲ್ ಅಧಿಕಾರಿ ಡಾ.ಉದಯ ಕುಮಾರ್ ಶೆಟ್ಟಿ ದೂರು ನೀಡಿದ್ದಾರೆ.

ಅದರಂತೆ ಹಿಂ.ಜಾ.ವೇದಿಕೆಯ ಪ್ರಮುಖರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 188, 269 ಐಪಿಸಿ ಕಲಂ: 5(1), 5(4) ದ ಕರ್ನಾಟಕ ಅಪಿಡಮಿಕ್ ಡಿಸಿಸ್ ಆ್ಯಕ್ಟ್ 2020ರಂತೆ ಪ್ರಕರಣ ದಾಖಲಾಗಿದೆ.

ಈ ಮೆರವಣಿಗೆಯಲ್ಲಿ ಸಚಿವ ವಿ.ಸುನೀಲ್ ಕುಮಾರ್, ಶಾಸಕ ಕೆ.ರಘುಪತಿ ಭಟ್, ಹಿಂಜಾವೇ ಮುಖಂಡರಾದ ಮಹೇಶ್ ಶೆಣೈ, ಪ್ರಕಾಶ್ ಕುಕ್ಕೆಹಳ್ಳಿ, ವಿಶು ಶೆಟ್ಟಿ ಅಂಬಲಪಾಡಿ ಸಹಿತ ಅನೇಕ ಪ್ರಮುಖರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಉಡುಪಿ : ದಿನಾಂಕ 15/10/2021 ರಂದು ಸಂಜೆ ಉಡುಪಿ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಕಾರ್ಯಕರ್ತರು ಯಾವುದೇ ಪೂರ್ವಾನುಮತಿಯಿಲ್ಲದೆ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಿಂದ ಅಂಬಲಪಾಡಿ ಮಹಾಕಾಳಿ ಅಮ್ಮನವರ ಸನ್ನಿಧಾನದವರೆಗೆ ಪಾದಯಾತ್ರೆಯನ್ನು ನಡೆಸಿ ಕೋವಿಡ್‌-19 ಸೋಂಕು ಹರಡುವುದನ್ನು ತಡೆಗಟ್ಟುವ ಬಗ್ಗೆ ಸರಕಾರ/ಜಿಲ್ಲಾಧಿಕಾರಿಯವರ ಆದೇಶವನ್ನು ಪಾಲನೆ ಮಾಡದೆ, ಆದೇಶವನ್ನು ಉಲ್ಲಂಘನೆ ಮಾಡಿರುತ್ತಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 152/2021 ಕಲಂ: 188, 269 IPC & ಕಲಂ: 5(1), 5(4) The Karnataka Epidemic Diseases Act 2020 ರಂತೆ ಪ್ರಕರಣ ದಾಖಲಿಸಲಾಗಿದೆ.

No Comments

Leave A Comment