Log In
BREAKING NEWS >
ಮಾರ್ಚ್ 22ರ೦ದು ಚ೦ದ್ರಾಮಾನ ಯುಗಾದಿ ,ಏಪ್ರಿಲ್ 15ರ೦ದು ಸೌರಮಾನ ಯುಗಾದಿ ಹಬ್ಬವು ನಡೆಯಲಿದೆ.ಹಲವಾರು ಗಣ್ಯರು ಯುಗಾದಿ ಹಬ್ಬದ ಶುಭಾಶಯವನ್ನು ಕೋರಿರುತ್ತಾರೆ.....

‘ಪಾಪ ಪಾಂಡು’ ಖ್ಯಾತಿಯ ಹಿರಿಯ ನಟ ಶಂಕರ್​ ರಾವ್​ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್​ ರಾವ್​ ನಿಧನರಾಗಿದ್ದಾರೆ.

ಸೋಮವಾರ ಬೆಳಗಿನ ಜಾವ 6.30ರ ಸುಮಾರಿಗೆ ಅವರು ಕೊನೆಯುಸಿರು ಎಳೆದರು ಎಂದು ತಿಳಿದುಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರ್​ ರಾವ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

ತುಮಕೂರು ಮೂಲದ ಶಂಕರ್ ರಾವ್ ಅವರು ವೈವಿದ್ಯಮಯ ಪಾತ್ರಗಳನ್ನು ನಿರ್ವಹಿಸಿದ ಅಪಾರ ಅನುಭವ ಉಳ್ಳವರು. ಅದರಲ್ಲೂ ಹಾಸ್ಯ ಪಾತ್ರಗಳಲ್ಲಿ ಮಿಂಚಿ ಕನ್ನಡಿಗರನ್ನು ರಂಜಿಸಿದವರು.

ಶಾಲಾ ದಿನಗಳಿಂದಲೇ ಅವರು ನಟನೆಯಲ್ಲಿ ಅಭಿರುಚಿ ಹೊಂದಿದ್ದರು. 1956ರಲ್ಲಿ ಬೆಂಗಳೂರಿಗೆ ಬಂದರು. ‘ನಟರಂಗ’ ತಂಡದ ಜೊತೆ ಶಂಕರ್​ ರಾವ್​  ಗುರುತಿಸಿಕೊಂಡಿದ್ದರು. ಹವ್ಯಾಸಿ ರಂಗಭೂಮಿ ಕಲಾವಿದನಾಗಿದ್ದ ಅವರು ಹಲವಾರು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು.

 

No Comments

Leave A Comment