Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಪೊಲೀಸ್ ಸಂಸ್ಮರಣಾ ದಿನ: ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಪೊಲೀಸ್  ಸಂಸ್ಮರಣಾ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಹುಬ್ಬಳ್ಳಿಯ ಸಿ.ಎ. ಆರ್. ಮೈದಾನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ  ಪ್ರತಾಪ ರೆಡ್ಡಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಪೊಲೀಸ್ ಆಯುಕ್ತ ಲಾಬೂರಾಮ್ ಮತ್ತಿತರರು ಹುತಾತ್ಮ ಪೊಲೀಸರಿಗೆ ಗೌರವ ಸಮರ್ಪಣೆ ಮಾಡಿದರು

ನಂತರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪೊಲೀಸರ ಕರ್ತವ್ಯ ಅಮೂಲ್ಯವಾಗಿದ್ದು,  ತಮ್ಮ ಜೀವನದ ಹಂಗನ್ನು ತೊರೆದು ಕರ್ತವ್ಯ ನಿರ್ವಹಿಸುತ್ತಾರೆ. ಅವರಿಗೆ ಬಹಳ ಗೌರವ ನೀಡಬೇಕಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕರಿಸುವ ಮನೋಭಾವ ನಾಗರಿಕರಿಗೆ ಬರಬೇಕು, ಅವರಿಗೆ ದೊರಕಬೇಕಾದ ಎಲ್ಲಾ ಸವಲತ್ತು ನೀಡಬೇಕಾದದ್ದು ಸರ್ಕಾರದ ಕರ್ತವ್ಯವಾಗಿದ್ದು, ಕಳೆದೆರಡು ವರ್ಷಗಳಲ್ಲಿ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ಅವರ ಸಮಸ್ಯೆಗಳನ್ನು ದೂರ ಮಾಡುವ ಪ್ರಯತ್ನ ಮಾಡಲಾಗಿದೆ ಎಂದರು.

ಪೊಲೀಸರ ಸೇವೆಯನ್ನು  ಉತ್ತಮಗಳೊಳಿಸಲು ಎಲ್ಲಾ ಪ್ರಯತ್ನ ಮಾಡಿದ್ದೇವೆ.  ಕಳೆದೆರಡು ವರ್ಷಗಳಲ್ಲಿ  ಅತಿ ಹೆಚ್ಚು ಮುಂಬಡ್ತಿ ನೀಡಲಾಗಿದೆ.  ಅವರಿಗೆ ನೈರ್ತಿಕ ಸ್ಥೈರ್ಯ ತುಂಬವ ಅವಶ್ಯಕತೆ ಇದೆ. 16 ಸಾವಿರ ಪೊಲೀಸರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ.  2022 ರೊಳಗೆ 50 ಸಾವಿರ ಪೊಲೀಸರ ಮನೆಗಳನ್ನು ಕಟ್ಟಲು ಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಭಾಗ್ಯ,  ವೇತನ ಪರಿಷ್ಕರಣೆ ಸೇರಿದಂತೆ ಪೊಲೀಸರಿಗಾಗಿ  ನಿರಂತರ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಆನ್ ಲೈನ್ ಗೇಮಿಂಗ್ ನಲ್ಲಿ ಹಲವಾರು ಕುಟುಂಬಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಅದಕ್ಕೆ ಬಿಗಿಯಾದ ಕ್ರಮವನ್ನು ತೆಗೆದುಕೊಳ್ಳಬೇಕಾದ ಅವಶ್ಯಕತೆಯಿದೆ ಎಂದು ಪೊಲೀಸರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

No Comments

Leave A Comment