ಟಿ20 ವಿಶ್ವಕಪ್: ಭಾರತದ ವಿರುದ್ಧದ ಪಂದ್ಯಕ್ಕೆ ಪಾಕಿಸ್ತಾನ ತಂಡ ಪ್ರಕಟ
ದುಬೈ: ಟಿ20 ವಿಶ್ವಕಪ್ ಟೂರ್ನಿಯ ಮೊದಲ ಹೈ ವೋಲ್ಟೇಜ್ ಪಂದ್ಯ ಎಂದೇ ಹೇಳಲಾಗುತ್ತಿರುವ ಭಾರತ-ಪಾಕಿಸ್ತಾನ ಪಂದ್ಯಕ್ಕೆ ಪಾಕ್ ತಂಡವನ್ನು ಘೋಷಣೆ ಮಾಡಲಾಗಿದೆ.
ಪಂದ್ಯ ಆರಂಭಕ್ಕೆ ಇನ್ನು ಕೇವಲ 24 ಗಂಟೆಗಳ ಅವಧಿ ಇರುವಂತೆಯೇ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಆಡುವ 11ರ ಬಳಗವನ್ನು ಪ್ರಕಟಿಸಿದೆ. ನಾಳಿನ ಭಾರತದ ವಿರುದ್ಧದ ಪಂದ್ಯಕ್ಕಾಗಿ ಬಾಬರ್ ಅಜಮ್ ನೇತೃತ್ವದ ಪಾಕ್ ತಂಡವನ್ನು ಪ್ರಕಟಿಸಲಾಗಿದೆ.