ಮಂಗಳೂರು: ನಗರದ ಎಂಜಿ ರಸ್ತೆಯಲ್ಲಿರುವ ಪ್ರತಿಷ್ಠಿತ ಪಬ್ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ ನಡೆದಿದೆ.
ಜೋರಾದ ಧ್ವನಿವರ್ಧಕಗಳನ್ನು ಬಳಸಿ ಕಿರಿಕಿರಿ ಉಂಟು ಮಾಡಲಾಗುತ್ತಿತ್ತು,ನಿಗದಿತ ಅವಧಿಗಿಂತ ಹೆಚ್ಚು ಸಮಯ ತೆರೆಯಲಾಗುತ್ತಿತ್ತು ಹಾಗೂ ಪಬ್‌ನಿಂದ ಹೊರಬರುವವರು ಅಶ್ಲೀಲವಾಗಿ ವರ್ತಿಸುತ್ತಿದ್ದರು ಎಂಬುದಾಗಿ ಸಾರ್ವಜನಿಕರು ದೂರಿದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಠಾಣೆ ಇನ್‌ಸ್ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದ ತಂಡ ದಾಳಿ ನಡೆಸಿ ಕಾರ್ಯಚರಣೆ ನಡೆಸಿದ್ದಾರೆ.