Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ನಟ ರಜನಿಕಾಂತ್‌; ಗುರು ಕೆ ಬಾಲಚಂದರ್ ಗೆ ಅರ್ಪಣೆ

ಚೆನ್ನೈ: ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೇಂದ್ರ ಸರ್ಕಾರ ಘೋಷಿಸಿದ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಅವರು ಸೋಮವಾರ ಸ್ವೀಕರಿಸಿದ್ದು, ಪ್ರಶಸ್ತಿಯನ್ನು ತಮ್ಮ ಗುರು, ಖ್ಯಾತ ನಿರ್ದೇಶಕ ದಿ. ಕೆ ಬಾಲಚಂದರ್ ಅವರಿಗೆ ಅರ್ಪಿಸಿದ್ದಾರೆ.

ಇಂದು ದೆಹಲಿಯಲ್ಲಿ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ನಟ ರಜನಿಕಾಂತ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರಜನಿಕಾಂತ್ ಅವರು, ತಮ್ಮ ಹಿರಿಯ ಸಹೋದರ ಸತ್ಯನಾರಾಯಣ ರಾವ್, ಸಾರಿಗೆ ಸಹೋದ್ಯೋಗಿ ಮತ್ತು ಸ್ನೇಹಿತ ರಾಜ್ ಬಹದ್ದೂರ್, ತಮ್ಮ ಅಭಿಮಾನಿಗಳು, ಚಲನಚಿತ್ರ ನಿರ್ಮಾಪಕರು, ಸಹೋದ್ಯೋಗಿಗಳು ಮತ್ತು ಐದು ದಶಕಗಳಲ್ಲಿ ಅವಿರತ ಬೆಂಬಲ ನೀಡಿದ ತಮಿಳು ಜನರಿಗೆ ಧನ್ಯವಾದಗಳನ್ನು ಅರ್ಪಿಸಿದರು.

ನಾನು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸುತ್ತಿರುವುದಕ್ಕೆ ಅತ್ಯಂತ ಸಂತೋಷವಾಗುತ್ತಿದೆ. ತಮಗೆ ಪ್ರತಿಷ್ಠಿತ ಪ್ರಶಸ್ತಿ ನೀಡಿದ ಸರ್ಕಾರಕ್ಕೆ ಧನ್ಯವಾದಗಳು ಎಂದು ರಜನಿಕಾಂತ್ ಅವರು ಹೇಳಿದ್ದಾರೆ.

ನಾನು ಈ ಪ್ರಶಸ್ತಿಯನ್ನು ನನ್ನ ಗುರು ಕೆ ಬಾಲಚಂದರ್ ಸರ್ ಅವರಿಗೆ ಅರ್ಪಿಸುತ್ತೇನೆ, ನನ್ನ ಸಹೋದರ ಸತ್ಯನಾರಾಯಣ ರಾವ್ ಅವರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ, ಅವರು ತಂದೆಯ ಸ್ಥಾನದಲ್ಲಿದ್ದು ನನಗೆ ಉತ್ತಮ ಮೌಲ್ಯಗಳನ್ನು ಕಲಿಸಿದ್ದಾರೆ. ನನ್ನ ಸ್ನೇಹಿತ, ಚಾಲಕ ಮತ್ತು ಸಾರಿಗೆ ಸಹೋದ್ಯೋಗಿ ರಾಜ್ ಬಹದ್ದೂರ್ ಅವರು ನನ್ನಲ್ಲಿರುವ ನಟನಾ ಪ್ರತಿಭೆಯನ್ನು ಗುರುತಿಸಿ ಸಿನಿಮಾ ಸೇರುವಂತೆ ಪ್ರೋತ್ಸಾಹಿಸಿದರು ಎಂದು ರಜನಿಕಾಂತ್ ನೆನಪಿಸಿಕೊಂಡರು.

No Comments

Leave A Comment