Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಧಾರವಾಡದಲ್ಲಿ ರಾಷ್ಟ್ರೀಯ ಮಟ್ಟದ ಆರ್​ಎಸ್​ಎಸ್​ ಬೈಠಕ್​ಗೆ ಮೋಹನ್ ಭಾಗವತ್ ಚಾಲನೆ

ಧಾರವಾಡ: ಇಂದಿನಿಂದ 3 ದಿನ ಧಾರವಾಡದ ಗರಗ ರಸ್ತೆಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS​) ರಾಷ್ಟ್ರೀಯ ಮಟ್ಟದ ಬೈಠಕ್ ನಡೆಯಲಿದೆ. ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ಮತ್ತು ಆರ್​ಎಸ್​ಎಸ್​ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಈ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಚಾಲನೆ ನೀಡಿದರು.

ಬಾಂಗ್ಲಾದೇಶದಲ್ಲಿ ನವರಾತ್ರಿ ವೇಳೆ ದುರ್ಗಾ ಪೂಜೆ ಸಂದರ್ಭದಲ್ಲಿಯೇ ಹಿಂದೂಗಳ ಮೇಲೆ ನಡೆದ ದಾಳಿಯ ಬಗ್ಗೆ ಈ 3 ದಿನಗಳ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ. ಹಾಗೇ, ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ. ಆರ್​ಎಸ್​ಎಸ್​ ಬೈಠಕ್ ಹಿನ್ನೆಲೆಯಲ್ಲಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಸುತ್ತಮುತ್ತಲಿನ ರಸ್ತೆಗಳು, ಸರ್ಕಲ್​ಗಳಲ್ಲಿ ಕೇಸರಿ ಬಣ್ಣದ ಬಾವುಟಗಳು ಹಾರಾಡುತ್ತಿವೆ.ಇಂದಿನಿಂದ ಅಕ್ಟೋಬರ್ 30ರವರೆಗೆ ಧಾರವಾಡದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಆರ್​ಎಸ್​ಎಸ್​ ಬೈಠಕ್ ನಡೆಯಲಿದೆ.

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದಾಳಿ ಹಾಗೂ ದೇವಸ್ಥಾನಗಳನ್ನು ಧ್ವಂಸ ಮಾಡಲಾಗಿದೆ. ಈ ಬಗ್ಗೆ ಆರ್​ಎಸ್​ಎಸ್​ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ. ಎರಡು ವರ್ಷಗಳ ಬಳಿಕ ಈ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಕಳೆದ ವರ್ಷ ಕೊರೊನಾದಿಂದಾಗಿ ಈ ಸಭೆಯನ್ನು ರದ್ದುಗೊಳಿಸಲಾಗಿತ್ತು.

2025ಕ್ಕೆ ಆರ್‌ಎಸ್‌ಎಸ್ ಶತಮಾನೋತ್ಸವವಿದೆ. ಈ ಹಿನ್ನೆಲೆಯಲ್ಲಿ 2021ರಿಂದ 2024ರ ಅವಧಿಯಲ್ಲಿ ಯಾವ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂಬುದರ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆಯಿದೆ. ಈ ಬಾರಿ ಪೂರ್ಣ ಪ್ರಮಾಣದ ಬೈಠಕ್ ನಡೆಯಲಿದ್ದು, ಆರ್‌ಎಸ್‌ಎಸ್‌ ಮುಖ್ಯಸ್ಥ, ಸರಸಂಘಚಾಲಕ ಮೋಹನ ಭಾಗವತ್, ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ಅಖಿಲ ಭಾರತೀಯ ಕ್ಷೇತ್ರೀಯ ಮತ್ತು ಪ್ರಾಂತ ಸ್ತರದ ಕಾರ್ಯಕರ್ತರು ಸೇರಿ ದೇಶದ 350ಕ್ಕೂ ಹೆಚ್ಚು ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ ನಡೆದಿದೆ. ದೇವಾಲಯ ಮೇಲೆ‌ ದಾಳಿ ನಡೆದಿದೆ. ಈ ಬಗ್ಗೆ ಕೂಡ ಚರ್ಚೆ ನಡೆಯಲಿದೆ. ಕೊರೊನಾ ಬಗ್ಗೆ ಎಲ್ಲ ಜಾಗೃತಿ ಇಟ್ಟುಕೊಂಡು ಕಾರ್ಯಕ್ರಮ ನಡೆಯಲಿದೆ. ಜುಲೈನಲ್ಲೇ ಈ ಕಾರ್ಯಕ್ರಮದ ಯೋಜನೆ ಹಾಕಲಾಗಿತ್ತು. ಆದರೆ, ಕೊರೊನಾ ಅಲೆ ಕಡಿಮೆಯಾಗಲಿ ಎಂದು ಇದೀಗ ಸಭೆ ಆಯೋಜಿಸಲಾಗಿದೆ. ಈ ಸಭೆಯಲ್ಲಿ ಯಾವುದೇ ಮಂತ್ರಿಗಳು ಸಭೆಯಲ್ಲಿ ಭಾಗವಹಿಸುವುದಿಲ್ಲ.

ಬೈಠಕ್​ನ ಕೊನೆಯ ದಿನವಾದ ಅ. 30ರಂದು ಬಾಂಗ್ಲಾದೇಶದಲ್ಲಿ ದಾಳಿಗೆ ಒಳಗಾಗಿರುವ ಹಿಂದೂಗಳ ಕುರಿತು ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ. ಭಾರತದಲ್ಲಿ ನಿರಂತರವಾಗಿ ಪೆಟ್ರೋಲ್​, ಡೀಸೆಲ್​ ಮತ್ತು ಗ್ಯಾಸ್ ಸಿಲಿಂಡರ್​ ಬೆಲೆ ಏರಿಕೆಯಾಗುತ್ತಿರುವುದರಿಂದ ಈ ಕುರಿತು ಕೂಡ ಚರ್ಚೆ ನಡೆಯುವ ಸಾಧ್ಯತೆ ಇದೆ. ಹಾಗೇ, ಮುಂದಿನ ವರ್ಷ ನಡೆಯುವ ಚುನಾವಣೆಗಳ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಬಿಜೆಪಿಯನ್ನು ಇನ್ನಷ್ಟು ಗಟ್ಟಿಗೊಳಿಸುವ ಬಗ್ಗೆಯೂ ಕಾರ್ಯತಂತ್ರ ರೂಪಿಸುವ ಸಾಧ್ಯತೆಯಿದೆ.

No Comments

Leave A Comment