Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ದೀಪ ಪ್ರಜ್ವಲನೆಯೊ೦ದಿಗೆ ವಿದ್ಯುಕ್ತ ಚಾಲನೆ.......ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಮುಂದಿನ ಮೂರು ವರ್ಷಗಳಿಗೆ ಆರ್ ಬಿ ಐ ಗವರ್ನರ್ ಆಗಿ ಶಕ್ತಿ ಕಾಂತ್ ದಾಸ್ ಮರು ನೇಮಕ

ಮುಂಬಯಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ನ ಹಾಲಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಡಿಸೆಂಬರ್ 10 ರ ನಂತರದ ಮೂರು ವರ್ಷಗಳ ಅವಧಿಗೆ  ಮರು ನೇಮಕ ಮಾಡಲಾಗಿದೆ.

ಕೇಂದ್ರ ಸಂಪುಟದ ನೇಮಕಾತಿ ಸಮಿತಿ ಗುರುವಾರ ತಡರಾತ್ರಿ ಮರು ನೇಮಕಾತಿ ನಿರ್ಧಾರಕ್ಕೆ ಅನುಮೋದನೆ ನೀಡಿದೆ.

64 ವರ್ಷದ ದಾಸ್ ಅವರು ಈ ಹಿಂದೆ ಹಣಕಾಸು ಸಚಿವಾಲಯದಲ್ಲಿ ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿದ್ದರು. 2018ರ ಡಿಸೆಂಬರ್ 11 ರಂದು ಮೂರು ವರ್ಷಗಳ ಅವಧಿಗೆ ಅವರನ್ನು ರಿಸರ್ವ್‌ ಬ್ಯಾಂಕ್‌ನ ಗವರ್ನರ್‌ ಆಗಿ ನೇಮಕ ಮಾಡಲಾಗಿತ್ತು.

No Comments

Leave A Comment