Log In
BREAKING NEWS >
ನವೆ೦ಬರ್ 22ರಿ೦ದ ನವೆ೦ಬರ್ 27ರವರೆಗೆ ಉಡುಪಿಯ ಮಹತೋಭಾರ ಶ್ರೀಚ೦ದ್ರಮೌಳೀಶ್ವರ ದೇವರ ಕಾಲಾವಧಿ ರಥೋತ್ಸವ ಜರಗಲಿದೆ....,,,ನವೆ೦ಬರ್ 28ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 94 ನೇ ಭಜನಾ ಸಪ್ತಾಹಮಹೋತ್ಸವ ಆರ೦ಭ....

ಮಂಗಳೂರು: ಉಲ್ಟಾ ಹಾರಿದ ರಾಷ್ಟ್ರ ಧ್ವಜ

ಮಂಗಳೂರು : ಕನ್ನಡ ರಾಜ್ಯೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ಸಂದರ್ಭ ರಾಷ್ಟ್ರಧ್ವಜ ತಲೆಕೆಳಗಾಗಿ ಹಾರಿದ ಘಟನೆ ಇಂದು ಮಂಗಳೂರು ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಡೆಯಿತು.

ಮಂಗಳೂರು ನಗರದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವದಲ್ಲಿ ಸಚಿವ ಅಂಗಾರ ಅವರು ರಾಷ್ಟ್ರ ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿದೆ.

ಧ್ವಜ ಸ್ತಂಭದಲ್ಲಿ ಮೊದಲೇ ರೆಡಿ ಮಾಡಿದ್ದ ಧ್ವಜವನ್ನು ಉಸ್ತುವಾರಿ ಸಚಿವರು ಅದರ ಹಗ್ಗ ಎಳೆದು ಹಾರಿಸಿದ್ದಾರೆ. ಸಚಿವರು ಧ್ವಜಕ್ಕೆ ಸೆಲ್ಯೂಟ್ ಹೊಡೆಯುತ್ತಿದ್ದಂತೆ ಜೊತೆಗಿದ್ದ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಮತ್ತು ಪೊಲೀಸ್ ಕಮಿಷನರ್ ಶಶಿಕುಮಾರ್ ಕೂಡ ಸೆಲ್ಯೂಟ್ ಹೊಡೆದಿದ್ದಾರೆ.‌ ನೆರೆದಿದ್ದವರೆಲ್ಲ ಎದ್ದು ನಿಂತು ಧ್ವಜಕ್ಕೆ ವಂದನೆ ಸಲ್ಲಿಸಿದ್ದಾರೆ. ಆ ಬಳಿಕ ರಾಷ್ಟ್ರ ಗೀತೆಯನ್ನು ಹಾಡಲಾಗಿದೆ.

ಅಲ್ಲಿ ಸೇರಿದ್ದ ಎಲ್ಲರನ್ನೂ ತೀವ್ರ ಮುಜುಗರಕ್ಕೀಡು ಮಾಡಿದ್ದು, ಬಳಿಕ ಅಧಿಕಾರಿಗಳು ಸರಿಪಡಿಸಿದರು.

No Comments

Leave A Comment