Log In
BREAKING NEWS >
ಡಿಸೆ೦ಬರ್ 08 ರಿ೦ದ ಡಿಸೆ೦ಬರ್ 15ರವರೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 93ನೇ ಭಜನಾ ಸಪ್ತಾಹಮಹೋತ್ಸವವು ಜರಗಲಿದೆ- ಪ್ರತಿ ನಿತ್ಯವೂ ಪೇಟೆ ಉತ್ಸವ,ತೊಟ್ಟಿಲ ಸೇವೆ,ಕಾಕಡಾರತಿ ಕಾರ್ಯಕ್ರಮವು ಜರಗಲಿದೆ....

ಆ್ಯಂಬುಲೆನ್ಸ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವೃದ್ಧ ಸಾವು

ಉಡುಪಿ:  ಕಾಪುವಿನ ಕೋತಲ್ ಕಟ್ಟೆಯ‌ ರಾ.ಹೆ. 66ರಲ್ಲಿ‌‌ ರಸ್ತೆ ದಾಟಲು ನಿಂತಿದ್ದ ವೃದ್ಧರೋರ್ವರು ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಉಳಿಯಾರಗೋಳಿ ಗ್ರಾಮದ ಕೆಳತೋಟ ನಿವಾಸಿ ಗೋವಿಂದ ಪೂಜಾರಿ (65) ಎಂದು ಗುರುತಿಸಲಾಗಿದೆ.

ಗೋವಿಂದ ಪೂಜಾರಿ ರಸ್ತೆ ದಾಟಲು ನಿಂತಿದ್ದ ವೇಳೆ, ಅವರಿಗೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದಿದ್ದು, ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

No Comments

Leave A Comment