Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ಮಹಾರಾಷ್ಟ್ರದಲ್ಲಿ ಭೀಕರ ಎನ್ ಕೌಂಟರ್: 4 ನಕ್ಸಲರು ಹತ, ಹಲವರಿಗೆ ಗಾಯ

ಮುಂಬೈ: ಮಹಾರಾಷ್ಟ್ರದಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿಗಳ ನಡುವೆ ಭೀಕರ ಎನ್ ಕೌಂಟರ್ ನಡೆದಿದ್ದು, ಈ ಘಟನೆಯಲ್ಲಿ ಕನಿಷ್ಠ ನಾಲ್ಕು ಮಂದಿ ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರದ ಗಡ್‌ ಚಿರೋಲಿ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಈ ಘಟನೆ ನಡೆದಿದ್ದು, ಇಲ್ಲಿನ ಗ್ಯಾರ ಪಟ್ಟಿ ಅರಣ್ಯ ಪ್ರದೇಶದಲ್ಲಿ ಧನೋರಾ ಪ್ರದೇಶದಲ್ಲಿ ಅಡಗಿದ್ದ ನಕ್ಸಲರು ಅಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆಗಳೂ ಕೂಡ ಗುಂಡಿನ ದಾಳಿ ನಡೆಸಿದ ಪರಿಣಾಮ ನಾಲ್ಕು ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಪ್ರಾಥಮಿಕ ಮಾಹಿತಿ ಪ್ರಕಾರ, ಗುಂಡಿನ ದಾಳಿಯಿಂದ ನಾಲ್ವರು ನಕ್ಸಲರು ಸತ್ತಿದ್ದಾರೆ. ಅಂತಿಮ ವರದಿ ಬಂದಾಗ ಕಾರ್ಯಾಚರಣೆ ಮುಂದುವರಿದಿತ್ತು. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿರುವ ಶಂಕೆ ಇದೆ ಎಂದು ಆ ಅಧಿಕಾರಿ ವಿವರಿಸಿದ್ದಾರೆ.

No Comments

Leave A Comment