Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಮಂಗಳೂರು: ದ.ಕ ಅಪರ ಜಿಲ್ಲಾಧಿಕಾರಿಯಾಗಿ ಚನ್ನಬಸಪ್ಪ ಕೆ, ಉಡುಪಿಗೆ ಬಾಲಕೃಷ್ಣಪ್ಪ ಇ ನೇಮಕ

ಮಂಗಳೂರು, ನ.19: ದ.ಕ ಅಪರ ಜಿಲ್ಲಾಧಿಕಾರಿಯಾಗಿ ಚನ್ನಬಸಪ್ಪ ಕೆ ಹಾಗೂ ಉಡುಪಿಗೆ ಬಾಲಕೃಷ್ಣಪ್ಪ ಇ ಇವರನ್ನು ನೇಮಿಸಲಾಗಿದೆ.

ಕರ್ನಾಟಕ ವಿಧಾನ ಪರಿಷತ್ತಿನ ದೈವಾರ್ಷಿಕ ಚುನಾವಣೆ-2021ರ ಹಿನ್ನೆಲೆ ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಕೆಎಎಸ್‌‌ ವೃಂದದ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಿಗದಿಪಡಿಸಿದ ಹುದ್ದೆಗಳಿಗೆ ವರ್ಗಾಯಿಸಿ ಆದೇಶಿಸಲಾಗಿದೆ.

ಉಡುಪಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರನ್ನು ದಾವಣಗೆರೆ ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ಕೆ ಇವರ ವರ್ಗಾವಣೆಯಿಂದ ತೆರವಾಗುವ ಹುದ್ದೆಗೆ ವರ್ಗಾಯಿಸಲಾಗಿದೆ. ಬೆಳಗಾವಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರನ್ನು ರಾಯಚೂರು ಅಪರ ಜಿಲ್ಲಾಧಿಕಾರಿ ದುರಗೇಶ್‌ ವರ್ಗಾವಣೆಯಿಂದ ತೆರವಾಗುವ ಹುದ್ದೆಗೆ, ತುಮಕೂರು ಜಿಲ್ಲೆ ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ಕೆ ಅವರನ್ನು ದ.ಕ ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ ಇವರ ಜಾಗಕ್ಕೆ ವರ್ಗಾಯಿಸಲಾಗಿದೆ.

ಕಲಬುರಗಿ ಅಪರ ಜಿಲ್ಲಾಧಿಕಾರಿ ಡಾ. ಶಂಕರಪ್ಪ ವಣಿಕ್ಕಾಳ್‌‌‌‌‌ ಅವರನ್ನು ಬೆಳಗಾವಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರ ವರ್ಗಾವಣೆಯಿಂದ ತೆರವಾಗುವ ಹುದ್ದೆಗೆ ವರ್ಗಾಯಿಸಿದ್ದು, ರಾಯಚೂರು ಅಪರ ಜಿಲ್ಲಾಧಿಕಾರಿಯಾದ ದುರಗೇಶ್‌‌ ಅವರನ್ನು ಕಲಬುರಗಿ ಅಪರ ಜಿಲ್ಲಾಧಿಕಾರಿ ಡಾ.ಶಂಕರಪ್ಪ ವಣಿಕ್ಕಾಳ್‌‌ ಅವರ ವರ್ಗಾವಣೆಯಿಂದ ತೆರವಾಗುವ ಹುದ್ದೆಗೆ ವರ್ಗಾಯಿಸಲಾಗಿದೆ.

ಚಿತ್ರದುರ್ಗ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಇ ಅವರನ್ನು ಉಡುಪಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಬಿ ಅವರ ವರ್ಗಾವಣೆಯಿಂದ ತೆರವಾಗುವ ಹುದ್ದೆಗೆ, ದಾವಣಗೆರೆ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಅವರನ್ನು ತುಮಕೂರು ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ಕೆ ಅವರ ವರ್ಗಾವಣೆಯಿಂದ ತೆರವಾಗುವ ಹುದ್ದೆಗೆ, ಉದ್ಯೋಗ ಹಾಗೂ ತರಬೇತಿ ಇಲಾಖೆ ನಿದೇರ್ಶಕ ಯೋಗೇಶ್ವರ ಎಸ್‌ ಅವರನ್ನು ಚಿತ್ರದುರ್ಗ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಇ ಅವರ ವರ್ಗಾವಣೆಯಿಂದ ತೆರವಾಗುವ ಹುದ್ದೆಗೆ ವರ್ಗಾಯಿಸಲಾಗಿದೆ.

No Comments

Leave A Comment