ಮಂಗಳೂರು: ವಿಮಾನ ನಿಲ್ದಾಣದಲ್ಲಿ 34.32 ಲಕ್ಷ ರೂ. ಮೌಲ್ಯದ ಚಿನ್ನ ವಶ
ಮಂಗಳೂರು, ನ 19 : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿಳಿದ ಪ್ರಯಾಣಿಕನಿಂದ 34.32 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ನ. 19 ರ ಶುಕ್ರವಾರ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ ನಲ್ಲಿ ಬಂದಿಳಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ಪ್ರಯಾಣಿಕನ ಬಳಿಯಿಂದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಚಿನ್ನವನ್ನು ಪೇಸ್ಟ್ ರೂಪದಲ್ಲಿ ದೇಹದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 34,32,240 ರೂಪಾಯಿ ಮೌಲ್ಯದ 681 ಗ್ರಾಂ ತೂಕದ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.