Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ತಮಿಳುನಾಡು: ನಿರಂತರ ಮಳೆಗೆ ಕುಸಿದ ಮನೆ, 9 ಮಂದಿ ಸಾವು

ಚೆನ್ನೈ: ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ಭಾರೀ ಮಳೆಗೆ ಮನೆ ಕುಸಿದುಬಿದ್ದ ಪರಿಣಾಮ ನಾಲ್ಕು ಮಕ್ಕಳು ಸೇರಿದಂತೆ ಒಂಬತ್ತು ಜನ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಅಗ್ನಿಶಾಮಕ, ರಕ್ಷಣಾ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡವರನ್ನು ಹೊರತೆಗೆದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು, ನಾಲ್ವರು ಮಕ್ಕಳು ಹಾಗೂ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ.

ಗಾಯಗೊಂಡ 9 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪೆರ್ನಂಬಟ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಘೋಷಿಸಿದ್ದಾರೆ.

ಕಳೆದ ವಾರ ಸುರಿದ ಭಾರೀ ಮಳೆಗೆ ತಮಿಳುನಾಡು ರಾಜಧಾನಿ ಚೆನ್ನೈ ಕೂಡ ಜಲಾವೃತವಾಗಿತ್ತು.

No Comments

Leave A Comment