Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ಉಡುಪಿ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಗರಸಭೆಯ ವ್ಯವಸ್ಥಾಪಕ ನಿಧನ

ಉಡುಪಿ, ನ 22: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಗರಸಭೆಯ ವ್ಯವಸ್ಥಾಪಕ ವೆಂಕಟರಮಣಯ್ಯರವರು ಚಿಕಿತ್ಸೆ ಫಲಕಾರಿಯಾಗದೆ ನ.22ರ ಇಂದು ಬೆಳಿಗ್ಗೆ 1 ಗ೦ಟೆಗೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಭಾನುವಾರ ಕುಂಜಿಬೆಟ್ಟು ಮುಖ್ಯರಸ್ತೆ ಡಿವೈಡರ್ ದಾಟುತ್ತಿದ್ದ ವೇಳೆ ಎಡವಿ ರಸ್ತೆಗೆಬಿದ್ದಿದ್ದರು. ಈ ಸಂದರ್ಭದಲ್ಲಿ ಓಮಿನಿ ಕಾರೊಂದು ಇವರಿಗೆ ಡಿಕ್ಕಿ ಹೊಡೆದಿದ್ದು, ಇದರಿಂದ ವೆಂಕಟರಮಣ ಗಂಭೀರವಾಗಿ ಗಾಯಗೊಂಡಿದ್ದರು.

ಕೂಡಲೇ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಅವರು ಚಿಕಿತ್ಸೆಗೆ ಸ್ಪ೦ದಿದೇ ಇದ್ದ ಕಾರಣದಿ೦ದಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಸೋಮವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ವೆಂಕಟರಮಣಯ್ಯ ರವರ ನಿಧನಕ್ಕೆ ಸಿಎಂಸಿ ಅಧ್ಯಕ್ಷರು,ಸರ್ವ ಸದಸ್ಯರು,ನಗರಸಭೆಯ ಸಿಬ್ಬ೦ಧಿವರ್ಗದವರು, ಶಾಸಕರು,ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಹಾಗೂ ಅಪಾರ ಮಿತ್ರರು ಸಂತಾಪ ಸೂಚಿಸಿದ್ದಾರೆ.

No Comments

Leave A Comment