Log In
BREAKING NEWS >
ನವೆ೦ಬರ್ 28ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 94 ನೇ ಭಜನಾ ಸಪ್ತಾಹಮಹೋತ್ಸವ ಆರ೦ಭ....ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಪಾಕಿಸ್ತಾನದಲ್ಲಿ ಹಿಂದು ಬಾಲಕನ ಮೇಲೆ ಅತ್ಯಾಚಾರ ನಡೆಸಿ ಹತ್ಯೆ – ಇಬ್ಬರ ಬಂಧನ

ಪಾಕಿಸ್ತಾನ, ನ.23 : ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 8 ವರ್ಷದ ಹಿಂದು ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿರುವ ದುರ್ಘಟನೆ ಸಂಭವಿಸಿದೆ.

ಬಾಲಕನ ಶವದ ಮೇಲೆ ಚಿತ್ರಹಿಂಸೆ ನೀಡಿರುವ ಗುರುತುಗಳು ಕುತ್ತಿಗೆ, ಬೆನ್ನು, ಸೊಂಟದಲ್ಲಿ ಪರಚಿರುವ ಗುರುತುಗಳು ಪತ್ತೆಯಾಗಿದೆ. ಬಾಲಕ ಐದನೇ ತರಗತಿ ಓದುತ್ತಿದ್ದಾನೆ ಎಂದು ಮಕ್ಕಳ ರಕ್ಷಣಾ ಪ್ರಾಧಿಕಾರ ಜುಬೇರ್ ಮಹೇರ್ ಹೇಳಿದ್ದಾರೆ.

ಈ ಘಟನೆ ಬೆಳಕಿಗೆ ಬಂದ ತಕ್ಷಣ ಬಾಬರ್ಲೋಯ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಲರ್ಟ್ ಆಗಿದ್ದರು. ಆ ಬಾಲಕನನ್ನು ಕೊಂದು, ಅತ್ಯಾಚಾರವೆಸಗಿದ್ದ ಇಬ್ಬರನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಇನ್ನು ಆರೋಪಿಗಳು ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಮುನ್ನ ಕತ್ತು ಕೊಯ್ದು ಹತ್ಯೆ ಮಾಡಿದ್ದಾರೆ. ಇಬ್ಬರು ಕಾಮುಕರಲ್ಲಿ ಈ ಪೈಕಿ ಒಬ್ಬ ತಪ್ಪೊಪ್ಪಿಕೊಂಡಿದ್ದಾನೆ.

No Comments

Leave A Comment