Log In
BREAKING NEWS >
ಡಿಸೆ೦ಬರ್ 08 ರಿ೦ದ ಡಿಸೆ೦ಬರ್ 15ರವರೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 93ನೇ ಭಜನಾ ಸಪ್ತಾಹಮಹೋತ್ಸವವು ಜರಗಲಿದೆ- ಪ್ರತಿ ನಿತ್ಯವೂ ಪೇಟೆ ಉತ್ಸವ,ತೊಟ್ಟಿಲ ಸೇವೆ,ಕಾಕಡಾರತಿ ಕಾರ್ಯಕ್ರಮವು ಜರಗಲಿದೆ....

ಮಂಗಳೂರು ರೈಲು ನಿಲ್ದಾಣದ ಫುಟ್​​ಪಾತ್​ನಲ್ಲಿ ಮಲಗಿದ್ದವರ ಮೇಲೆ ಹರಿದ ಕಾರು : ಓರ್ವನ ಸ್ಥಿತಿ ಗಂಭೀರ

ಮಂಗಳೂರು: ಇಲ್ಲಿನ ಪಡೀಲ್‌ನಲ್ಲಿರುವ ಜಂಕ್ಷನ್ ರೈಲು ನಿಲ್ದಾಣದ ಹೊರಭಾಗದ ಫುಟ್​​ಪಾತ್​ನಲ್ಲಿ ಮಲಗಿದ್ದವರ ಮೇಲೆ ಕಾರೊಂದು ಹರಿದಿದೆ. ಅಪಘಾತದಿಂದ ಇಬ್ಬರು ಗಾಯಗೊಂಡಿದ್ದಾರೆ.

ಇಂದು ಮುಂಜಾನೆ ಮೂರು ಗಂಟೆ ಸಮಯಕ್ಕೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದ ಪಾರ್ಕಿಂಗ್​​ನಲ್ಲಿದ್ದ ಕಾರನ್ನು ಅಲ್ಲೇ ಮುಂದಕ್ಕೆ ಇಡುವ ವೇಳೆ ಕಾರು ಫುಟ್​​ಪಾತ್ ಮೇಲೆ ಮಲಗಿದ್ದ ಇಬ್ಬರ ಮೇಲೆ ಹರಿದಿದ್ದು, ಉಳಿದವರು ಸ್ವಲ್ಪದರಲ್ಲೇ ಪಾರಾಗಿದ್ದಾರೆ.

ಸ್ಥಳದಲ್ಲಿದ್ದ ಬೇರೆ ನಾಲ್ಕು ಕಾರುಗಳು ಜಖಂಗೊಂಡಿವೆ. ಇಬ್ಬರು ಗಾಯಾಳುಗಳಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment