Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ಪಶ್ಚಿಮ ಬಂಗಾಳ: ಲಾರಿಗೆ ಗುದ್ದಿದ ಶವಸಂಸ್ಕಾರಕ್ಕೆ ತೆರಳುತ್ತಿದ್ದ ವಾಹನ, 18 ಮಂದಿ ದುರ್ಮರಣ

ನಾಡಿಯಾ: ಶವಸಂಸ್ಕಾರಕ್ಕೆಂದು ತೆರಳುತ್ತಿದ್ದ ವಾಹನ ಹಾಗೂ ಕಲ್ಲು ತುಂಬಿದ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 18 ಮಂದಿ ಸಾವನ್ನಪ್ಪಿ, 5 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಂಸಖಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.

ನಾಡಿಯಾ ಜಿಲ್ಲೆಯ ಫುಲ್ಬರಿ ರಾಜ್ಯ ಹೆದ್ದಾರಿಯಲ್ಲಿ ಕಳೆದ ರಾತ್ರಿ 12 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಮೃತಪಟ್ಟವರು, ಮಹಿಳೆಯ ಶವವನ್ನು ಅಂತ್ಯಸಂಸ್ಕಾರಕ್ಕೆಂದು ಮೆಟಾಡೋರ್​ ವಾಹನದಲ್ಲಿ ತೆಗೆದುಕೊಂಡು ಹೋಗುತ್ತಿದ್ದರು ಎಂದು ವರದಿಗಳು ತಿಳಿಸಿವೆ.

ದಟ್ಟವಾದ ಮಂಜು ಮತ್ತು ವಾಹನದ ಅತಿಯಾದ ವೇಗದಿಂದಾಗಿ ಶವ ಸಾಗಿಸುತ್ತಿದ್ದ ವಾಹನ ಕಲ್ಲು ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ 18 ಮಂದಿ ಸಾವನ್ನಪ್ಪಿದ್ದು, 5 ಮಂದಿ ಗಾಯಗೊಂಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಹಂಸಖಾಲಿ ಪೊಲೀಸರು ಗಾಯಾಳುಗಳನ್ನು ಶಕ್ತಿನಗರ ಆಸ್ಪತ್ರೆಗೆ ಸಾಗಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

No Comments

Leave A Comment