Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಧ್ರುವ ಸರ್ಜಾ- ಎ.ಪಿ ಅರ್ಜುನ್ ಕಾಂಬಿನೇಷನ್ ಸಿನಿಮಾ ‘ಮಾರ್ಟಿನ್’ಗೆ ವೈಭವಿ ಶಾಂಡಿಲ್ಯ ನಾಯಕಿ

ನಿರ್ದೇಶಕ ಎ.ಪಿ ಅರ್ಜುನ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್ನಿನಲ್ಲಿ ಮೂಡಿ ಬರುತ್ತಿರುವ ಸಿನಿಮಾ ಮಾರ್ಟಿನ್ ಗೆ ನಾಯಕಿಯಾಗಿ ನಟಿ ವೈಭವಿ ಶಾಂಡಿಲ್ಯ ಆಯ್ಕೆಯಾಗಿದ್ದಾರೆ.

ಮರಾಠಿ, ತೆಲುಗು, ತಮಿಳು ಸಿನಿಮಾಗಳಲ್ಲಿ ಹೆಸರು ಮಾಡಿರುವ ವೈಭವಿ, ‘ರಾಜ್ ವಿಷ್ಣು’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ್ದರು. ನಿರ್ಮಾಣ ಹಂತದಲ್ಲಿರುವ ಯೋಗರಾಜ್ ಭಟ್ ನಿರ್ದೇಶದ ಗಾಳಿಪಟ-2 ಸಿನಿಮಾದಲ್ಲೂ ವೈಭವಿ ನಟಿಸುತ್ತಿದ್ದಾರೆ. ‘ಮಾರ್ಟಿನ್’ ಅವರ ಮೂರನೇ ಕನ್ನಡ ಸಿನಿಮಾ ಆಗಲಿದೆ.

ತಾರಾಗಣ ವಿಚಾರದಲ್ಲಿ ಮಾರ್ಟಿನ್ ತಂಡ ಗುಟ್ಟು ಕಾಪಾಡಿಕೊಂಡಿದ್ದು, ಯಾವುದೇ ಮಾಹಿತಿಯನ್ನು ಹೊರಬಿಟ್ಟಿಲ್ಲ. ವೈಭವಿ ಶಾಂಡಿಲ್ಯ ಅವರು ಈಗಾಗಲೇ ಚಿತ್ರತಂಡವನ್ನು ಸೇರಿಕೊಂಡಿದ್ದು, ಚಿತ್ರೀಕರಣದಲ್ಲಿ ತೊಡಗಿದ್ದಾರೆ ಎನ್ನುವುದು ಮೂಲಗಳಿಂದ ತಿಳಿದುಬಂದಿದೆ.

No Comments

Leave A Comment