ಉಡುಪಿ:ಶ್ರೀ ಕೃಷ್ಣ ಮಠಕ್ಕೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಭೇಟಿ ಉಡುಪಿ:ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕ ಸರ್ಕಾರದ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಇವರು ಆಗಮಿಸಿ ದೇವರ ದರ್ಶನ ಪಡೆದರು. ಅದಮಾರು ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿ ಪರ್ಯಾಯ ಮಂಗಲೋತ್ಸವದ ಆಮಂತ್ರಣ ಪತ್ರಿಕೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್, ಪರ್ಯಾಯ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್,ಶ್ರೀ ಕೃಷ್ಣಾಸೇವಾ ಬಳಗದ ಪ್ರದೀಪ್ ರಾವ್ ಮೊದಲಾದವರು ಉಪಸ್ಥಿತರಿದ್ದರು. Share this:TweetWhatsAppEmailPrintTelegram