Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ದೀಪ ಪ್ರಜ್ವಲನೆಯೊ೦ದಿಗೆ ವಿದ್ಯುಕ್ತ ಚಾಲನೆ.......ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಗಂಡ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿದ ಪತ್ನಿ!

ಹೈದರಾಬಾದ್​, ಡಿ. 03: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ತೆಲ್ಲಪುರ್​ನಲ್ಲಿ ಸಾಫ್ಟ್​ವೇರ್​ ಇಂಜಿನಿಯರ್​ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ ಪತ್ನಿ ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿ ಘಟನೆ ನಡೆದಿದೆ.

ಗಂಡ ಚಂದ್ರಕಾಂತ್​ ರಾವ್​​ ಆತ್ಮಹತ್ಯೆ ಮಾಡಿಕೊಂಡಿದ್ದು, ಮಗ ಪ್ರೀತಂ (9) ಮತ್ತು ಮಗಳು ಸರ್ವಜ್ಞ (ಒಂದೂವರೆ ವರ್ಷ) ಇಬ್ಬರನ್ನು ಕೆರೆಗೆ ಎಸೆದು ತಾನು ಕೆರೆಗೆ ಹಾರಿ ಪತ್ನಿ ಲಾವಣ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ಚಂದ್ರಕಾಂತ ರಾವ್​ ಅವರು ಬ್ಯಾಂಕ್​ನಲ್ಲಿ ಸಾಲ ಪಡೆದು ಬಿಎಚ್​ಇಎಲ್​ ಬಳಿಯ ಬೈರಗುಡದಲ್ಲಿ ಅಪಾರ್ಟ್​ಮೆಂಟ್​ ಖರೀದಿಸಿದ್ದರು.​

ಆದರೆ ಚಂದ್ರಕಾಂತ್​ಗೆ ಸಾಲ ತೀರಿಸುವುದು ಕಷ್ಟವಾಗಿತ್ತು. ಅವರ ತಂದೆ ಬಿಎಚ್​ಇಎಲ್​ ನಿವೃತ್ತ ನೌಕರರಾಗಿದ್ದರಿಂದ ಆರ್ಥಿಕ ಸಹಾಯ ಮಾಡುವಂತೆ ಕೋರಿದ್ದರು. ಆದರೆ ತಂದೆ ನಿರಾಕರಿಸಿದ್ದರಂತೆ. ಇದೇ ವಿಚಾರವಾಗಿ ಕಳೆದ ಒಂದು ವರ್ಷದಿಂದಲೂ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.

ನಿರಂತರ ಜಗಳದಿಂದ ಮನನೊಂದಿದ್ದ ಚಂದ್ರಕಾಂತ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

No Comments

Leave A Comment