Log In
BREAKING NEWS >
ಉಡುಪಿಯ ಕಲ್ಸ೦ಕದ ರೋಯಲ್ ಗಾರ್ಡನ್ ನಲ್ಲಿ ಉಡುಪಿ ಉತ್ಸವ ಆರ೦ಭವಾಗಿದ್ದು ಪ್ರತಿ ನಿತ್ಯವೂ ಸಾಯ೦ಕಾಲ 4ರಿ೦ದ 9ಗ೦ಟೆಯವರೆಗೆ ವೀಕ್ಷಿಸಲು ಅವಕಾಶವಿದೆ....

ಚಿತ್ರದುರ್ಗ: ಈರುಳ್ಳಿ ತುಂಬಿ ಕೆಟ್ಟು ನಿಂತಿದ್ದ ಕ್ಯಾಂಟರ್ ಗೆ- ಗ್ಯಾಸ್ ಟ್ಯಾಂಕರ್ ಡಿಕ್ಕಿ; ನಾಲ್ವರ ದುರ್ಮರಣ

ಚಿತ್ರದುರ್ಗ: ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಕ್ಯಾಂಟರ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ದೊಡ್ಡಸಿದ್ದವ್ವನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 40ರಲ್ಲಿ ಗ್ಯಾಸ್ ಟ್ಯಾಂಕರ್, ಈರುಳ್ಳಿ ತುಂಬಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗದಗ ಜಿಲ್ಲೆ ರೋಣದಿಂದ ಬೆಂಗಳೂರಿಗೆ ಈರುಳ್ಳಿ ಸಾಗಿಸುತ್ತಿದ್ದ ಕ್ಯಾಂಟರ್ ಟೈರ್ ಪಂಕ್ಚರ್ ಆದ ಹಿನ್ನೆಲೆಯಲ್ಲಿ ನಾಲ್ವರು ಕ್ಯಾಂಟರ್ ಅನ್ನು  ರಸ್ತೆಬದಿ ನಿಲ್ಲಿಸಿ ಟೈರ್ ಬದಲಾಯಿಸುತ್ತಿದ್ದರು.

ಈ ವೇಳೆ ಹಿಂದಿನಿಂದ ಬಂದ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೆೊಡೆದಿದೆ. ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ. ರಾಯಚೂರಿನ ಹುಲುಗಪ್ಪ, ಕುಷ್ಟಗಿಯ ಮಂಜುನಾಥ್, ವಿಜಯಪುರದ ಸಂಜಯ್, ರೋಣದ ಶರಣಪ್ಪ ಮೃತರು. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

No Comments

Leave A Comment