ವಿಶ್ವಾರ್ಪಣಮ್ ಕಾರ್ಯಕ್ರಮ:ಸಾರ್ವಜನಿಕರಿಗೆ ಉಚಿತ ಲಸಿಕಾ ಅಭಿಯಾನ
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಅದಮಾರು ಮಠದ ಪರ್ಯಾಯ ಮಂಗಲೋತ್ಸವದ ವಿಶ್ವಾರ್ಪಣಮ್ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಇಂದು ಸಾಯಂಕಾಲ ರಾಜಾಂಗಣದಲ್ಲಿ ನಡೆಯಲಿದ್ದು, ಇದಕ್ಕೆ ಪೂರಕವಾಗಿ ಬೆಳಿಗ್ಗೆ ಸಾರ್ವಜನಿಕರಿಗೆ ಉಚಿತ ಲಸಿಕಾ ಅಭಿಯಾನಕ್ಕೆ ಪರ್ಯಾಯ ಅದಮಾರು ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀ ಪಾದರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ ಭಟ್ ವೈ ,ಕೋವಿಡ್ ನೋಡೆಲ್ ಅಧಿಕಾರಿ ಡಾ.ಪ್ರಶಾಂತ ಭಟ್ ಹಾಗೂ ಸಾಮಾಜಿಕ ಚಿಂತಕರಾದ ಸೇತುರಾಂ ಉಪಸ್ಥಿತರಿದ್ದರು.
ಪರ್ಯಾಯ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್ ಸ್ವಾಗತಿಸಿ ಕೋವಿಡ್ ನೋಡೆಲ್ ಅಧಿಕಾರಿ ಡಾ.ಪ್ರಶಾಂತ ಭಟ್ ಪ್ರಸ್ತಾವನೆ ಮಾಡಿ, ವಿದ್ವಾಂಸರಾದ ಕುತ್ಪಾಡಿ ಕೃಷ್ಣರಾಜ ಭಟ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ನೀಡಿದರು.