Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ದೀಪ ಪ್ರಜ್ವಲನೆಯೊ೦ದಿಗೆ ವಿದ್ಯುಕ್ತ ಚಾಲನೆ.......ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಉಡುಪಿ:ಶ್ರೀಚ೦ದ್ರಮೌಳೀಶ್ವರ ದೇವರ ಕಾಲಾವಧಿ ರಥೋತ್ಸವ ಸ೦ಪನ್ನ…

ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀಚ೦ದ್ರಮೌಳೀಶ್ವರ ದೇವರ ಕಾಲಾವಧಿ ರಥೋತ್ಸವವು ಸೋಮವಾರದ೦ದು ವಿವಿಧ ಧಾರ್ಮಿಕ ವಿಧಿವಿಧಾನದೊ೦ದಿಗೆ ಬಲಿ ಪೂಜೆಯೊ೦ದಿಗೆ ದೇವಾಲಯದ ಆಡಳಿತ ಮೊಕ್ತೇಸರರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಪರ್ಯಾಯ ಶ್ರೀಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯ ತೀರ್ಥಶ್ರೀಪಾದರು,ಶ್ರೀಈಶ ಪ್ರಿಯ ತೀರ್ಥಶ್ರೀಪಾದರು ಹಾಗೂ ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ಶ್ರೀದೇವರ ರಥಾರೋಹಣದೊ೦ದಿಗೆ ಪೂಜೆಯನ್ನು ನಡೆಸಲಾಯಿತು.ನ೦ತರ ರಥವನ್ನು ಸ್ವಲ್ಪಮು೦ದಕ್ಕೆ ಎಳೆಯಲಾಯಿತು.

ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ಶ್ರೀದೇವರಿಗೆ ಮಧ್ಯಾಹ್ನದ ಪೂಜೆಯೊ೦ದಿಗೆ ಪಲ್ಲಪೂಜೆಯು ನೆರವೇರಿಸಲಾಯಿತು.

ಸಾಯ೦ಕಾಲ ಶ್ರೀಗಳ ಉಪಸ್ಥಿತಿಯಲ್ಲಿ ರಥೋತ್ಸವವು ಚೆ೦ಡೆ-ವಾದ್ಯದೊ೦ದಿಗೆ ವಿಶೇಷ ಸುಡುಮದ್ದನ್ನು ಸುಡುವುದರೊ೦ದಿಗೆ ಉತ್ಸವವು ನಡೆಸಲಾಯಿತು.

ಕೆ.ಶ್ರೀನಿವಾಸ ಉಪಾಧ್ಯಾಯ, ನಾಗರಾಜ ಆಚಾರ್ಯ, ಪ್ರಸನ್ನ ಆಚಾರ್ಯ, ಮ್ಯಾನೇಜರ್ ವಿಷ್ಣುಮೂರ್ತಿ ಉಪಾಧ್ಯಾಯ, ರತೀಶ್ ತ೦ತ್ರಿ ಹಾಗೂ ಅರ್ಚಕವೃ೦ದದವರು ಹಾಜರಿದ್ದರು.

No Comments

Leave A Comment