Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಸೈನಿಕರಿಂದ ನಾಗಾಲ್ಯಾಂಡ್ ನಾಗರೀಕರ ಹತ್ಯೆ: ಕೋರ್ಟ್ ಆಫ್ ಎನ್ ಕ್ವೈರಿ ಆದೇಶಿಸಿದ ಭಾರತೀಯ ಸೇನೆ!!

ನವದೆಹಲಿ: ನಾಗಾಲ್ಯಾಂಡ್ ನಲ್ಲಿ ನಡೆದ 14 ಮಂದಿ ನಾಗರಿಕರ ಹತ್ಯೆಗೆ ಸಂಬಂಧಿಸಿದಂತೆ ಭಾರತೀಯ ಸೇನೆ ಕೋರ್ಟ್ ಆಫ್ ಎನ್ ಕ್ವೈರಿ (Court of Inquiry)ಗೆ ಆದೇಶ ನೀಡಿದೆ.

ಅದರಂತೆ ಮೇಜರ್ ಜನರಲ್ ಶ್ರೇಣಿಯ ಅಧಿಕಾರಿಯ ಅಡಿಯಲ್ಲಿ ತನಿಖೆ ಮಾಡಲು ಭಾರತೀಯ ಸೇನೆಯು ನ್ಯಾಯಾಲಯದ ವಿಚಾರಣೆಯನ್ನು ಸ್ಥಾಪಿಸಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಈ ಬಗ್ಗೆ ಮಾತನಾಡಿರುವ ಸೇನಾಧಿಕಾರಿಯೊಬ್ಬರು, ‘ನಾಗಾಲ್ಯಾಂಡ್ ನಾಗರಿಕ ಹತ್ಯೆಗಳನ್ನು ಮೇಜರ್ ಜನರಲ್ ಶ್ರೇಣಿಯ ಅಧಿಕಾರಿಯ ಅಡಿಯಲ್ಲಿ ತನಿಖೆ ಮಾಡಲು ಭಾರತೀಯ ಸೇನೆಯು ನ್ಯಾಯಾಲಯದ ವಿಚಾರಣೆಯನ್ನು ಸ್ಥಾಪಿಸಿದೆ. ಅಧಿಕಾರಿಯನ್ನು ಈಶಾನ್ಯ ವಲಯದಲ್ಲಿ ಮಾತ್ರ ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ನಾಗಾಲ್ಯಾಂಡ್ ನ ಸೋಮ ಜಿಲ್ಲೆಯಲ್ಲಿ ಎನ್‌ಎಸ್‌ಸಿಎನ್ (ಕೆವೈ) ಭಯೋತ್ಪಾದಕರ ಚಲನವಲನದ ಬಗ್ಗೆ ಗುಪ್ತಚರ ಮಾಹಿತಿ ಪಡೆದ ನಂತರ ಸೇನಾ ವಿಶೇಷ ಪಡೆಗಳ ಘಟಕವು ಗುಂಡಿನ ದಾಳಿಯಲ್ಲಿ ತೊಡಗಿದೆ.

ಉಗ್ರರೆಂದು ತಿಳಿದು ನಾಗರೀಕರ ಹತ್ಯೆ
ಇನ್ನು ನಾಗಾಲ್ಯಾಂಡ್‌ನ ಮೊನ್ ಜಿಲ್ಲೆಯ ಟಿರು ಮತ್ತು ಒಟಿಂಗ್‌ ಗ್ರಾಮಗಳಲ್ಲಿ 14 ನಾಗರಿಕರನ್ನು ಭದ್ರತಾ ಪಡೆಗಳ ಸಿಬ್ಬಂದಿ ಗುಂಡಿಟ್ಟು ಕೊಂದಿದ್ದಾರೆ. ದಾಳಿಯಲ್ಲಿ 11 ನಾಗರಿಕರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇದು ಶನಿವಾರ ಸಂಜೆಯ ಹೊತ್ತು ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಟಿರು ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ, ನಾಗರಿಕರನ್ನು ಉಗ್ರರು ಎಂದು ತಪ್ಪಾಗಿ ಗುರುತಿಸಿ ಸೈನಿಕರು ನಡೆಸಿದ ದಾಳಿಯಲ್ಲಿ ಎಂಟುನಾಗರಿಕರು ಮೃತಪಟ್ಟಿದ್ದಾರೆ. ಕತ್ತಲಾದರೂ ಮನೆಗೆ ಬಾರದೇ ಇದ್ದವರನ್ನು ಹುಡುಕಿಕೊಂಡು ಗ್ರಾಮಸ್ಥರು ಸ್ಥಳಕ್ಕೆ ಬಂದಿದ್ದಾರೆ.

ಆಗ ನಡೆದ ಘರ್ಷಣೆಯಲ್ಲಿ ಮತ್ತೆ ಐವರು ನಾಗರಿಕರು ಸೈನಿಕರ ಗುಂಡಿಗೆ ಬಲಿಯಾಗಿದ್ದಾರೆ. ನಾಗರಿಕರ ಹತ್ಯೆಯ ನಂತರ ಸುತ್ತಮುತ್ತಲಿನ ಗ್ರಾಮಸ್ಥರು ಅಸ್ಸಾಂ ರೈಫಲ್ಸ್‌ನ ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದಾರೆ. ಆಗ ಸೈನಿಕರು ಹಾರಿಸಿದ ಗುಂಡಿಗೆ ಮತ್ತೊಬ್ಬ ನಾಗರಿಕ ಬಲಿಯಾಗಿದ್ದಾರೆ.

No Comments

Leave A Comment