Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ದೀಪ ಪ್ರಜ್ವಲನೆಯೊ೦ದಿಗೆ ವಿದ್ಯುಕ್ತ ಚಾಲನೆ.......ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಮುಂಬಯಿಯಲ್ಲಿ ಭಾರೀ ಅಗ್ನಿ ಆಕಸ್ಮಿಕ: 40 ಬಿಎಂಡಬ್ಲ್ಯೂ ಐಷಾರಾಮಿ ಕಾರುಗಳು ಸುಟ್ಟು ಭಸ್ಮ

ಮುಂಬಯಿ:  ನವಿ ಮುಂಬೈನ ಟುರ್ಬೆ ಎಂಐಡಿಸಿ ಏರಿಯಾದಲ್ಲಿರುವ ಶೋರೂಮ್​​ನಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಆಗಿದ್ದು, ಸುಮಾರು 40 ಬಿಎಂಡಬ್ಲ್ಯೂ ಕಾರುಗಳು ಸುಟ್ಟುಕರಕಲಾಗಿವೆ.

ಅವಘಡದಲ್ಲಿ ಯಾರೂ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ.  ಈ ಶೋರೂಂನಲ್ಲಿಯೇ ಕಾರುಗಳನ್ನು ಪಾರ್ಕ್​ ಮಾಡಲಾದ ಗೋಡೌನ್​ ಕೂಡ ಇತ್ತು. ಇಂದು ಮುಂಜಾನೆ 5.30ರಹೊತ್ತಿಗೆ ಬೆಂಕಿ ಬಿದ್ದಿದೆ ಎಂದು ಎಂಐಡಿಸಿ ಅಗ್ನಿಶಾಮಕ ದಳದ ಮುಖ್ಯ ಅಧಿಕಾರಿ ಆರ್​.ಬಿ.ಪಾಟೀಲ್​ ತಿಳಿಸಿದ್ದಾರೆ.

ಬೆಂಕಿಯ ತೀವ್ರತೆ ಅತಿಹೆಚ್ಚಾಗಿ ಇದ್ದುದರಿಂದ ಕೇವಲ ಎಂಐಡಿಸಿ ಪ್ರದೇಶದ ಅಗ್ನಿಶಾಮಕ ದಳದ ಸಿಬ್ಬಂದಿ, ವಾಹನ ಸಾಕಾಗಲಿಲ್ಲ. . ಒಟ್ಟು 10 ಫೈರ್​ ಫೈಟ್​ ಟ್ರಕ್​ಗಳನ್ನು ತರಲಾಗಿತ್ತು. ಎಲ್ಲ ಸೇರಿ ಹೋರಾಟ ಮಾಡಿದರೂ ಬೆಂಕಿ ನಂದಿಸಲು 6ಗಂಟೆಗಳ ಕಾಲ ಬೇಕಾಯಿತು  ಎಂದು ವರದಿಯಾಗಿದೆ.

ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎನ್ನುವುದು ಇನ್ನೂ ತಿಳಿದುಬಂದಿಲ್ಲ. ತುರ್ಭೆ ಪೊಲೀಸ್ ಠಾಣೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ. ಬೆಂಕಿಯ ತೀವ್ರತೆಗೆ ಶೋರೂಂ ಒಳಗೆ ಇದ್ದ ಎಲ್ಲ ದಾಖಲೆಗಳು ಮತ್ತು ಪೀಠೋಪಕರಣಗಳು ಸುಟ್ಟು ಭಸ್ಮವಾಗಿವೆ.

No Comments

Leave A Comment