Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಮಂಗಳೂರು: ಕೊನೆಗೂ ನ್ಯಾಯಾಲಯದ ಮುಂದೆ ಶರಣಾದ ಲೈಂಗಿಕ ಕಿರುಕುಳದ ಆರೋಪಿ ವಕೀಲ ರಾಜೇಶ್

ಮಂಗಳೂರು:ಡಿ 20, ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ವಕೀಲ ಕೆ.ಎಸ್‌.ಎನ್‌. ರಾಜೇಶ್‌ ಭಟ್‌ ಕೊನೆಗೂ ನ್ಯಾಯಾಲಯಕ್ಕೆ ಡಿ.20ರ ಸೋಮವಾರ ಶರಣಾಗಿದ್ದಾನೆ.

ಕಾನೂನು ಮಹಾ ವಿದ್ಯಾಲಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕನಾಗಿದ್ದ ಕೆ.ಎಸ್‌.ಎನ್‌. ರಾಜೇಶ್‌ ಭಟ್ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆಯೇ ಆರೋಪಿ ಪೊಲೀಸರ ಕೈಗೆ ಸಿಗದೇ ಪರಾರಿಯಾಗಿದ್ದ.

ಲೈಂಗಿಕ ಕಿರುಕುಳ ನೀಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸ ಇಲಾಖೆ ಆರೋಪಿ ರಾಜೇಶ್ ವಿರುದ್ಧ ಲುಕ್‌ಔಟ್‌ ನೋಟಿಸ್‌ ಹೊರಡಿಸಿತ್ತು. ಇದಲ್ಲದೆ ಎಲ್ಲಾ ಬ್ಯಾಂಕ್ ಖಾತೆಗಳನ್ನು ಬ್ಲಾಕ್ ಮಾಡಲಾಗಿತ್ತು. ನ್ಯಾಯವಾದಿಗೆ ಕೃತ್ಯಕ್ಕೆ ಹಾಗೂ ಕೃತ್ಯದ ಬಳಿಕ ಸಹಕರ ನೀಡಿದವರನ್ನು ವಶಕ್ಕೆ ಪಡೆಯಲಾಗಿತ್ತು. ಅದರೂ ಇದುವರೆಗೆ ಆರೋಪಿಯ ಸುಳಿವು ಪತ್ತೆಯಾಗಿರಲಿಲ್ಲ. ಇದರೊಂದಿಗೆ ಆರೋಪಿ ಸಲ್ಲಿಸಿಲ್ಲ ನಿರೀಕ್ಷಾಣಾ ಜಾಮೀನು ಅರ್ಜಿ ಜಿಲ್ಲಾ ಹಾಗೂ ಹೈಕೋರ್ಟ್ ನಿಂದಲೂ ಈತನ ಅರ್ಜಿ ಜಾಮೀನು ನಿರಾಕರಣೆಯಾಗಿತ್ತು. ಈ ನಡುವೆ ಜಿಲ್ಲಾ ಮೂರನೇ ಜೆಎಂಎಫ್ ಸಿ ಶರಣಾಗಿದ್ದಾನೆ.

ಏನಿದು ಪ್ರಕರಣ?:

ವಿದ್ಯಾರ್ಥಿನಿ ಕಳೆದ ಆ.8 ರಂದು ಕೆ.ಎಸ್.ಎನ್ ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದರು. ಆಗ ರಾಜೇಶ್ ಯುವತಿಯನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳಲು ಒತ್ತಾಯಿಸುತ್ತಿದ್ದರು. ಸೆ.25 ರಂದು ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ರಾಜೇಶ್ ಲೋಕಾಯುಕ್ತದಲ್ಲಿ ದಾಖಲಾಗುವ ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿಶೇಷ ಸರಕಾರಿ ಅಭಿಯೋಜಕರಾಗಿ ಕಳೆದ ಕೆಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.ರಾಜೇಶ್ ಮತ್ತು ವಿದ್ಯಾರ್ಥಿನಿ ಮಾತನಾಡಿದ್ದು ಎನ್ನಲಾದ ಫೋನ್ ಕರೆಯ ಆಡಿಯೋ ಹರಿದಾಡಿತ್ತು. ಆರೋಪಗಳನ್ನು ರಾಜೇಶ್ ನಿರಾಕರಿಸಿದ್ದರು.

No Comments

Leave A Comment