Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಲೂಧಿಯಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಂಕೀರ್ಣದಲ್ಲಿ ಸ್ಫೋಟ: ಇಬ್ಬರು ಸಾವು

ಲೂಧಿಯಾನ: ಪಂಜಾಬ್ ನ ಲುಧಿಯಾನದಲ್ಲಿರುವ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಐದು ಜನ ಗಾಯಗೊಂಡಿದ್ದಾರೆ.

ನ್ಯಾಯಾಲಯದ ಸಂಕೀರ್ಣದ ಎರಡನೇ ಮಹಡಿಯ ವಾಶ್ ರೂಂನಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಈಗಾಗಲೇ ದೌಡಾಯಿಸಿದ್ದು, ಕಾರ್ಯಾಚರಣೆ ಮುಂದುವರಸಿದ್ದಾರೆ.

ಈ ಪ್ರದೇಶದಲ್ಲಿ ಸ್ಫೋಟದ ಸದ್ದು ಕೇಳಿದ ಕೂಡಲೇ ನ್ಯಾಯಾಲಯದ ಹೊರಗೆ ಜನ ಜಮಾಯಿಸಿದ್ದರು. ವಕೀಲರ ಮುಷ್ಕರ ನಡೆಯುತ್ತಿದ್ದ ಕಾರಣ ಘಟನೆ ನಡೆದ ಸಂದರ್ಭದಲ್ಲಿ ಕೆಲವೇ ಕೆಲವು ಮಂದಿ ಮಾತ್ರ ನ್ಯಾಯಾಲಯದ ಆವರಣದಲ್ಲಿ ಹಾಜರಿದ್ದರು.

ಲುಧಿಯಾನದಲ್ಲಿ ನಡೆದ ಘಟನೆಯು ಬಾಂಬ್ ಸ್ಫೋಟವೇ ಅಥವಾ ಆಕಸ್ಮಿಕ ಘಟನೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಆದಾಗ್ಯೂ, ಪಂಜಾಬ್‍ನ ವಿವಿಧ ಭಾಗಗಳಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ವ್ಯಕ್ತಿಗಳನ್ನು ಹತ್ಯೆ ಮಾಡಿದ ಎರಡೇ ದಿನಗಳಲ್ಲಿ ಈ ಅವಘಡ ಸಂಭವಿಸಿದೆ.

No Comments

Leave A Comment