Log In
BREAKING NEWS >
ನವೆ೦ಬರ್ 22ರಿ೦ದ ನವೆ೦ಬರ್ 27ರವರೆಗೆ ಉಡುಪಿಯ ಮಹತೋಭಾರ ಶ್ರೀಚ೦ದ್ರಮೌಳೀಶ್ವರ ದೇವರ ಕಾಲಾವಧಿ ರಥೋತ್ಸವ ಜರಗಲಿದೆ....,,,ನವೆ೦ಬರ್ 28ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 94 ನೇ ಭಜನಾ ಸಪ್ತಾಹಮಹೋತ್ಸವ ಆರ೦ಭ....

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ : ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ಮಂಜೂರು

ಬೆಂಗಳೂರು: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್‌ನಲ್ಲಿ ಜಾಮೀನು ದೊರೆತಿದೆ.

2016ರ ಜುಲೈ 28ರಂದು ಉದ್ಯಮಿ ಭಾಸ್ಕರ್​ ಶೆಟ್ಟಿ ಅವರನ್ನು ಉಡುಪಿಯ ಇಂದ್ರಾಳಿಯಲ್ಲಿರುವ ಅವರ ಮನೆಯಲ್ಲಿ ಅವರ ಹೆಂಡತಿ ರಾಜೇಶ್ವರಿ ಶೆಟ್ಟಿ ಹಾಗೂ ಮಗ ನವನೀತ್ ಶೆಟ್ಟಿ ಸೇರಿ ಕೊಲೆ ಮಾಡಿದ್ದರು. ಬಳಿಕ ಮೃತದೇಹವನ್ನು ಅರ್ಚಕ ನಿರಂಜನ್ ಭಟ್ ಜತೆ ಸೇರಿ  ಹೋಮದ ಕುಂಡದಲ್ಲಿ ಹಾಕಿ ಸುಟ್ಟಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಕಳೆದ ಜೂನ್‌ನಲ್ಲಿ ಉಡುಪಿ ನ್ಯಾಯಾಲಯವು ಕೊಲೆ ಪ್ರಕರಣದ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಮತ್ತು ರಾಜೇಶ್ವರಿ ಗೆಳೆಯ, ಅರ್ಚಕ ನಿರಂಜನ್ ಭಟ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ರಾಜೇಶ್ವರಿ ಶೆಟ್ಟಿ ಹೈಕೋರ್ಟ್ ಮೇಟ್ಟಿಲೇರಿದ್ದರು. ಇದೀಗ ರಾಜೇಶ್ವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

No Comments

Leave A Comment