Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ಭಾರತದಲ್ಲಿ 90,928 ಹೊಸ ಕೋವಿಡ್ ಪ್ರಕರಣ, 325 ಸಾವು, 2,630 ಓಮಿಕ್ರಾನ್ ಸೋಂಕಿತರು: ಮಹಾರಾಷ್ಟ್ರದಲ್ಲಿ ಗರಿಷ್ಠ

ನವದೆಹಲಿ: ಓಮಿಕ್ರಾನ್ ಸೋಂಕು ಭೀತಿ ನಡುವೆಯೇ ಕರ್ನಾಟಕ ಸೇರಿದಂತೆ ದೇಶಾದ್ಯಂತ ಕೋವಿಡ್ ಸೋಂಕಿತರ ಸಂಖ್ಯೆ ಹೊಸ ವರ್ಷದ ನಂತರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 90 ಸಾವಿರದ 928 ಹೊಸ ಕೇಸುಗಳು ವರದಿಯಾಗಿದ್ದು 325 ಮಂದಿ ಮೃತಪಟ್ಟಿದ್ದಾರೆ. ಮೊನ್ನೆ ದೇಶದಲ್ಲಿ 58,097 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು.

ದೇಶದಲ್ಲಿ ಒಟ್ಟು ಸಕ್ರಿಯ ಕೋವಿಡ್ ಸೋಂಕಿತರ  ಸಂಖ್ಯೆ 2,85,401ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 19 ಸಾವಿರದ 206 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಕೋವಿಡ್ ನಿಂದ ಚೇತರಿಸಿಕೊಂಡವರ ಸಂಖ್ಯೆ 3,43,41,009ಕ್ಕೆ ತಲುಪಿದೆ. ದೇಶದಲ್ಲಿ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 4 ಲಕ್ಷದ 82 ಸಾವಿರದ 876ಕ್ಕೆ ಏರಿಕೆಯಾಗಿದೆ. ಗುಣಮುಖ ಹೊಂದುತ್ತಿರುವವರ ಪ್ರಮಾಣ ಶೇಕಡಾ 97.81ರಷ್ಟಾಗಿದೆ.

ಭಾರತದಲ್ಲಿ ಒಂದೇ 14,13,030 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೆ 68.53 ಕೋಟಿ ಜನರನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದೆ.

ಭಾರತದಲ್ಲಿ ಕಳೆದ ವರ್ಷ 2021ರ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ಇದೀಗ 15ರಿಂದ 18 ವರ್ಷದ ಮಕ್ಕಳಿಗೆ ಸಹ ಕೊರೋನಾ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 148.67 ಕೋಟಿ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಓಮಿಕ್ರಾನ್ ಸೋಂಕಿತರು: ಕರ್ನಾಟಕದಲ್ಲಿ 226 ಹೊಸ ಓಮಿಕ್ರಾನ್ ಸೋಂಕಿತರು ಕಳೆದ 24 ಗಂಟೆಗಳಲ್ಲಿ ಪತ್ತೆಯಾಗಿದ್ದು, 25 ಮಂದಿ ಗುಣಮುಖರಾಗಿದ್ದಾರೆ. ಮಹಾರಷ್ಟ್ರದಲ್ಲಿ ಅತಿಹೆಚ್ಚು 797 ಪ್ರಕರಣ ವರದಿಯಾಗಿದ್ದು, ನಂತರದ ಸ್ಥಾನದಲ್ಲಿ ದೆಹಲಿ 465 ಕೇಸುಗಳು ವರದಿಯಾಗಿವೆ. ಒಟ್ಟಾರೆ ದೇಶದಲ್ಲಿ 2,630 ಸೋಂಕಿತರಿದ್ದಾರೆ.

No Comments

Leave A Comment