Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ದೊಡ್ಡಬಳ್ಳಾಪುರದಲ್ಲಿ ಘೋರ ಘಟನೆ: ಮಕ್ಕಳಿಗೆ ಬೆಂಕಿ ಹಚ್ಚಿ, ತಾಯಿ ಆತ್ಮಹತ್ಯೆ

ದೊಡ್ಡಬಳ್ಳಾಪುರ: ಅನಾರೋಗ್ಯದಿಂದ ಬೇಸತ್ತಿದ್ದ 27 ವರ್ಷದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಬಳಿಕ ತಾನೂ ಕೂಡಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದ ಗೊಲ್ಲಹಳ್ಳಿಯಲ್ಲಿ ನಡೆದಿದೆ.  ಮಂಗಳವಾರ ಈ ಘಟನೆ ನಡೆದಿದ್ದು, ಗುರುವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ.

ಪತಿ ತನ್ನನ್ನು ವೀಕೆಂಡ್ ಡಿನ್ನರ್ ಗೆ  ಹೋಟೆಲ್ ಗೆ ಕರೆದುಕೊಂಡು ಹೋಗದಿದ್ದಕ್ಕೆ ಆಕೆ ಮನನೊಂದಿದ್ದಳು. ಇದೇ ವಿಚಾರವಾಗಿ ದಂಪತನಿ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ. ಆದರೆ ಪೊಲೀಸರು ಅದನ್ನು ತಳ್ಳಿಹಾಕಿದರು.

ಮೃತ ಮಹಿಳೆಯನ್ನು ಸಂಧ್ಯಾ ಎಸ್ ಎಂದು ಗುರುತಿಸಲಾಗಿದೆ.  ಆಕೆಯ ಮಗಳು ಕುಸುಮಾ (4)  ಮಗ ರೋಹಿತ್ (2) ಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಬಳಿಕ ತಾನೂ ಕೂಡಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ದೊಡ್ಡಬಳ್ಳಾಪುರದಲ್ಲಿ ಮೊಬೈಲ್ ಸರ್ವೀಸ್ ಸೆಂಟರ್ ಇಟ್ಟುಕೊಂಡಿರುವ ಶ್ರೀಕಾಂತ್ ಜೊತೆಗೆ ಕೆಲವು ವರ್ಷಗಳ ಹಿಂದೆ ಸಂಧ್ಯಾಳ ವಿವಾಹವಾಗಿತ್ತು. ಆಕೆ ಅನಾರೋಗ್ಯದಿಂದ ಬಳಲುತ್ತಿದ್ದಳು. ಇದರಿಂದ ಆಕೆ ಬೇಸತ್ತಿದ್ದಳು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮಂಗಳವಾರ ಮಧ್ಯಾಹ್ನ ತನ್ನ ಮಕ್ಕಳಿಗೆ ಬೆಂಕಿ ಹಚ್ಚಿದ್ದು, ಬಳಿಕ ತಾನೂ ಕೂಡಾ ಬೆಂಕಿ ಹಚ್ಚಿಕೊಂಡಿದ್ದಾಳೆ. ಇದನ್ನು ಗಮನಿಸಿದ ನೆರೆಹೊರೆಯವರು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ಮೂವರು ಮೃತಪಟ್ಟಿದ್ದಾರೆ.

ಶ್ರೀಕಾಂತ್ ಹಾಗೂ ಸಂಧ್ಯಾಳ ಪೋಷಕರನ್ನು ಪೊಲೀಸರು ವಿಚಾರಣೆ ನಡೆಸಿದಾಗ ಯಾವುದೇ ಆರೋಪ ಕಂಡುಬಂದಿಲ್ಲ. ಹಾಗಾಗೀ ಸ್ವಾಭಾವಿಕ ಸಾವು  ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ವಿಚಾರಣೆ ನಡೆಸುತ್ತಿದ್ದಾರೆ.

No Comments

Leave A Comment