Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಮುಖ್ಯಮಂತ್ರಿ ಬೊಮ್ಮಾಯಿಗೆ ಶ್ರೀಕೃಷ್ಣಾಪುರ ಮಠಾಧೀಶರ ಪರ್ಯಾಯೋತ್ಸವ ಆಮಂತ್ರಣ ಪತ್ರ ನೀಡಿಕೆ-ಆಹ್ವಾನ

ಉಡುಪಿ:ಉಡುಪಿ ರಾಜ್ಯದ ಮುಖ್ಯಮಂತ್ರಿಯವರಾದ ಬಸವರಾಜ್ ಬೊಮ್ಮಾಯಿ ಅವರನ್ನು ಉಡುಪಿ ಶ್ರೀಕೃಷ್ಣಾಪುರ ಮಠಾಧೀಶರ ಪರ್ಯಾಯೋತ್ಸವಕ್ಕೆ ಪರ್ಯಾಯೋತ್ಸವ ಸಮಿತಿ ಗೌರವ ಕಾರ್ಯಧ್ಯಕ್ಷರು, ಶಾಸಕರಾದ ಕೆ. ರಘುಪತಿ ಭಟ್ ಅವರು ಆಮಂತ್ರಣ ಪತ್ರ ನೀಡಿ ಆಹ್ವಾನಿಸಿದರು. ವಿಶ್ವ ಪ್ರಸಿದ್ಧ ಉಡುಪಿ ಪರ್ಯಾಯ ಸುಗಮವಾಗಿ ನಡೆಸಲು ಅನುಕೂಲ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸುವಂತೆ ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ. ಕಾರಜೋಳ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್, ಭಾರತಿ ಶೆಟ್ಟಿ ಮತ್ತು ಪರ್ಯಾಯೋತ್ಸವ ಸಮಿತಿಯ ಉಪಾಧ್ಯಕ್ಷರಾದ ಶ್ರೀಪತಿ ಭಟ್ ಉಚ್ಚಿಲ, ಪ್ರಧಾನ ಕಾರ್ಯದರ್ಶಿಗಳಾದ ವಿಷ್ಣು ಪ್ರಸಾದ್ ಪಾಡಿಗಾರ್, ಆರ್ಥಿಕ ಸಮಿತಿ ಸಂಚಾಲಕರಾದ ಜಯಪ್ರಕಾಶ್ ಕೆದ್ಲಾಯ ಉಪಸ್ಥಿತರಿದ್ದರು.

No Comments

Leave A Comment