ಕಂದಾಯ ಸಚಿವ ಆರ್. ಅಶೋಕ್ ಗೆ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲು
ಬೆಂಗಳೂರು: ಕಂದಾಯ ಸಚಿವ ಆರ್ ಅಶೋಕ್ಗೆ ಕೊರೋನಾ ಸೋಂಕು ದೃಢ ಪಟ್ಟಿದ್ದು, ಈ ಹಿನ್ನೆಲೆ ಅಶೋಕ್ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿನ್ನೆ ಸಚಿವ ಸಂಪುಟ ಸಭೆಗೂ ಅಶೋಕ್ ಗೈರಾಗಿದ್ದರು. ಈ ಹಿಂದೆ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೂ ಕೊರೋನಾ ಪಾಸಿಟಿವ್ ಕಂಡು ಬಂದಿತ್ತು, ಕರ್ನಾಟಕದಲ್ಲಿ ಕೊರೊನಾ ಹಾಗೂ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ.