ಉಡುಪಿ: ಶ್ರೀಕೃಷ್ಣಮಠದಲ್ಲಿ ಸಪ್ತೋತ್ಸವಕ್ಕೆ ಅದ್ದೂರಿಯ ಚಾಲನೆ… ಉಡುಪಿ: ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣನ ವಾರ್ಷಿಕ ಸಪ್ತೋತ್ಸವವು ದೇವತಾಪ್ರಾರ್ಥನೆಯೊಂದಿಗೆ ಅಷ್ಟಮಠಾಧೀಶರ ಉಪಸ್ಥಿತಿಯಲ್ಲಿ ಭಾನುವಾರ ನಡೆಯಿತು. ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು,ಪರ್ಯಾಯ ಪೀಠಾಧೀಶರಾದ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು,ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥರು ಹಾಗೂ ಶಿರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ಪಾಲ್ಗೊಂಡಿದ್ದರು. Share this:TweetWhatsAppEmailPrintTelegram